ಜಿಲ್ಲೆ

ರಾಯಣ್ಣ ಜನ್ಮದಿನಾಚರಣೆ

Davangere - Desk - Mahesh Babu E

ಚಿತ್ರದುರ್ಗ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆ. 15ರಂದು ಬೆಳಗ್ಗೆ 8ಕ್ಕೆ ಜಿಲ್ಲಾಡಳಿತ, ಜಿಪಂನಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾಧಿಕಾರಿ ದಿವ್ಯಾಪ್ರಭು ರಾಯಣ್ಣ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಗೌರವ ಸಮರ್ಪಿಸಲಿದ್ದಾರೆ. ವಿವಿಧ ಕ್ಷೇತ್ರದ ಗಣ್ಯರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.