ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನ ಆಚರಿಸಲಾಯಿತು. ಜಿಲ್ಲಾಧಿಕಾರಿ ಟಿ. ಭೂಬಾಲನ್, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಬದ್ರುದ್ಧಿನ್ ಸೌದಾಗರ ಮತ್ತಿತರರಿದ್ದಾರೆ. 
ಜಿಲ್ಲೆ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನ ಆಚರಣೆ

ವಿಜಯಪುರ : ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನ ಆಚರಿಸಲಾಯಿತು.
ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು.

ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ಧಿನ್ ಸೌದಾಗರ, ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ ಮತ್ತಿತರರಿದ್ದರು.