ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 19 ರಿಂದ 26 ತನಕ ನಡೆಯುವ ಬ್ರಹ್ಮಕಲಹೋತ್ಸವ ಪ್ರಯುಕ್ತ ಚಪ್ಪರ ಮುಹೂರ್ತ ಕಾರ್ಯಕ್ರಮ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸೋಮವಾರ ದೇವಸ್ಥಾನದ ಅಂಗಣದಲ್ಲಿ ನಡೆಯಿತು.  
ಜಿಲ್ಲೆ

ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಹೋತ್ಸವಕ್ಕೆ ಚಪ್ಪರ ಮುಹೂರ್ತ

Mangaluru - Prakash MC Manjeshwar

ಮಂಗಳೂರು: ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 19 ರಿಂದ 26 ತನಕ ನಡೆಯುವ ಬ್ರಹ್ಮಕಲಹೋತ್ಸವ ಪ್ರಯುಕ್ತ ಚಪ್ಪರ ಮುಹೂರ್ತ ಕಾರ್ಯಕ್ರಮ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸೋಮವಾರ ದೇವಸ್ಥಾನದ ಅಂಗಣದಲ್ಲಿ ನಡೆಯಿತು.
ಅರ್ಚಕರಾದ ದಿನೇಶ್ ಭಟ್ ದೈಲ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಗೌಡ ಕಾರಂಬಡೆ, ಕೋಶಾಧಿಕಾರಿ ಶಮಿತ್ ಶಿವನಗರ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸದಾನಂದ ಗೌಡ ಮತ್ತಾವು, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಚೌಟ ಮಡಂದೂರ್ , ಕೋಶಾಧಿಕಾರಿ ಸಂತೋಷ್ ಕುಮಾರ್ ರಾಯಿ ಬೆಟ್ಟು, ಕಾರ್ಯದರ್ಶಿ ಪ್ರದೀಪ್ ಮಿಯಾಲ್, ಭಜನಾ ಮಂಡಳಿಯ ಅಧ್ಯಕ್ಷ ರಾಜೇಶ್ ಶಿವನಗರ ಚಪ್ಪರ ಸಮಿತಿ ಸಂಚಾಲಕ ಪದ್ಮನಾಭ ಗೌಡ ಮಿಯಾಲ್, ವ್ಯವಸ್ಥಾಪನಾ ಸಮಿತಿಯ ಸದಸ್ಯ ವಿಶ್ವನಾಥ ಗೌಡ ಬರೆಬಾಯಿ ಹಾಗೂ ಬ್ರಹ್ಮ ಕಲಶೋತ್ಸವ , ಜೀರ್ಣೋದ್ಧಾರ ಮತ್ತು ವ್ಯವಸ್ಥಾಪನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.