ಜಿಲ್ಲೆ

ರೈತರನ್ನು ನಿರ್ಲಕ್ಷ್ಯಿಸಿದರೆ ತಕ್ಕಪಾಠ: ಮುಖಂಡ ಕೆ.ಕೆ.ರಾಧಾಕೃಷ್ಣ ಕೀಲಾರ ಎಚ್ಚರಿಕೆ

reportermys

ಮಂಡ್ಯ: ರೈತರು ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಗಲು ರಾತ್ರಿಯೆನ್ನದೆ ಧರಣಿ ನಡೆಸುತ್ತಿದ್ದಾರೆ. ಆದರೆ ಸರ್ಕಾರದ ಮಾತ್ರ ಈ ಬಗ್ಗೆ ತಲೆಕೆಡಿಸಿಕೊಳ್ಳದಿರುವುದು ಖಂಡನೀಯ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಮುಖಂಡ ಕೆ.ಕೆ.ರಾಧಾಕೃಷ್ಣ ಕೀಲಾರ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಸರ್‌ಎಂವಿ ಪ್ರತಿಮೆ ಎದುರು ರೈತ ಸಂಘದಿಂದ ನಡೆಸುತ್ತಿರುವ ಧರಣಿಯಲ್ಲಿ ಭಾನುವಾರ ಭಾಗವಹಿಸಿ ಬೆಂಬಲ ನೀಡಿದರು. ಇಂದು ಪ್ರತಿ ವಸ್ತುವಿನ ಬೆಲೆ ಹೆಚ್ಚಾಗುತ್ತಿದೆ. ಇದಕ್ಕೆ ಕೃಷಿ ಕ್ಷೇತ್ರವೂ ಹೊರತಾಗಿಲ್ಲ. ಬೇಸಾಯಕ್ಕೆ ಪೂರಕವಾಗಿರುವ ವಸ್ತುಗಳ ಬೆಲೆಯೂ ಏರಿಕೆಯಾಗಿದೆ. ಹೀಗಿರುವಾರ ಎಷ್ಟೋ ವರ್ಷದ ಹಿಂದೆ ನೀಡುತ್ತಿದ್ದ ದರವನ್ನೇ ಈಗಲೂ ನೀಡಿದರೆ ರೈತರು ಜೀವನ ಮಾಡುವುದಾದರೂ ಹೇಗೆ?. ಈ ಹಿನ್ನೆಲೆಯಲ್ಲಿ ತಮ್ಮ ಬೇಡಿಕೆಗೆ ಈಡೇರಿಸುವಂತೆ ಪ್ರತಿಭಟನೆ ಮಾಡುತ್ತಿದ್ದಾರೆ. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರವು ಕೂಡಲೇ ರೈತರ ಹಲವು ಬೇಡಿಕೆಗಳನ್ನು ಈಡೇರಿಸಬೇಕು. ವಿದ್ಯುತ್ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಬೇಕು. ಮಾತ್ರವಲ್ಲದೆ ಖಾಯಂ ಆಗಿ ಭತ್ತ ರಾಗಿ ಖರೀದಿ ಕೇಂದ್ರಗಳನ್ನು ತೆರೆಯುಬೇಕು ಎಂದು ಒತ್ತಾಯಿಸಿದರು.

14ನೇ ದಿನ ಪೂರೈಕೆ: ಪ್ರತಿ ಟನ್ ಕಬ್ಬಿಗೆ 4,500 ರೂ ಹಾಗೂ ಪ್ರತಿ ಲೀಟರ್ ಹಾಲಿಗೆ 40 ರೂ ನಿಗದಿಪಡಿಸುವಂತೆ ರೈತ ಸಂಘದಿಂದ ನಡೆಯುತ್ತಿರುವ ಧರಣಿ ಭಾನುವಾರ 14ನೇ ದಿನ ಪೂರೈಸಿತು. ರಾಜ್ಯ ಸಂಘಟನಾ ಕಾರ್ಯದರ್ಶಿ ಎಸ್.ಸಿ.ಮಧುಚಂದನ್, ಶಿವಳ್ಳಿ ಚಂದ್ರು ಇತರರಿದ್ದರು.