ಮಡಿಕೇರಿ: ನಗರದ ನಾಲ್ಕು ಶಕ್ತಿ ದೇವತೆಗಳಲ್ಲೊಂದಾದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ ೧೬ನೇ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಏ.೨೧ ಮತ್ತು ೨೨ ರಂದು ನಡೆಯಲಿದೆ.
ಕೇರಳದ ಪಯ್ಯನೂರ್‌ನ ಶ್ರೀ ಈಶ್ವರಿ ನಂಬೂದರಿರವರ ನೇತೃತ್ವದಲ್ಲಿ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿ ವಿಧಾನಗಳು ಜರುಗಲಿದ್ದು, ಏ.೨೧ ರಂದು ಸಂಜೆ ೬ ಗಂಟೆಗೆ ಆಚಾರ್ಯರ ಆಗಮನ, ದೇವಾಲಯದಲ್ಲಿ ಪುಣ್ಯಾಹ ಶುದ್ಧಿ, ದೇವಿ ಪೂಜೆ, ಸುದರ್ಶನ ಹೋಮ ಮತ್ತು ಪ್ರಸಾದ ವಿತರಣೆ ನಡೆಯಲಿದೆ.
ಏ.೨೨ ರಂದು ಬೆಳಿಗ್ಗೆ ೭ ಗಂಟೆಗೆ ಮಹಾ ಗಣಪತಿ ಹೋಮ, ಮಹಾ ಮೃತ್ಯುಂಜಯ ಹೋಮ, ಕಳಸ ಪೂಜೆ, ದೇವಿಗೆ ಅಭಿಷೇಕ, ಅಲಂಕಾರ ಪೂಜೆ ಹಾಗೂ ಮಹಾ ಪೂಜೆ ನೆರವೇರಲಿದ್ದು, ಮಧ್ಯಾಹ್ನ ಅನ್ನದಾನ ನೆರವೇರಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ತೀರ್ಥ ಪ್ರಸಾದವನ್ನು ಸ್ವೀಕರಿಸುವಂತೆ ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ಮನವಿ ಮಾಡಿದೆ.