ಮುಂಡರಗಿ: ಎಲ್ಲರೂ ಪ್ರತಿದಿನ ದಿನಪತ್ರಿಕೆ ಓದುವ ಹವ್ಯಾಸ ಹೊಂದಬೇಕು. ದಿನಪತ್ರಿಕೆ ಓದುವುದರಿಂದ ಜ್ಞಾನ ವೃದ್ಧಿಸಿಕೊಳ್ಳಬಹುದು. ದಿನಪತ್ರಿಕೆ ಓದುವುದರಿಂದ ಸ್ಪರ್ಧಾತ್ಮಕ ಪರೀಕ್ಷೆಗೂ ಸಹಕಾರಿಯಾಗಲಿದೆ ಎಂದು ಶಾಸಕ ಡಾ.ಚಂದ್ರು ಲಮಾಣಿ ಹೇಳಿದರು.
ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕ ಹಾಗೂ ಜಗದ್ಗುರು ಅನ್ನದಾನೀಶ್ವರ ಶಿಕ್ಷಣ ಮಹಾವಿದ್ಯಾಲಯ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಕರ್ತರು ಹಾಗೂ ನಾವು ಸೇರಿ ಸಮಾಜದ ಒಳಿತಿಗೆ, ಅಭಿವೃದ್ಧಿ ಕೆಲಸ ಮಾಡೋಣ. ಬರುವ ದಿನಗಳಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಅನುದಾನ ಕಲ್ಪಿಸಲಾಗುವುದು ಎಂದರು.
ಸಾನ್ನಿಧ್ಯ ವಹಿಸಿದ್ದ ನಾಡೋಜ ಡಾ.ಅನ್ನದಾನೀಶ್ವರ ಸ್ವಾಮೀಜಿ ಮಾತನಾಡಿ, ಪತ್ರಿಕೆಗಳಲ್ಲಿ ಎಲ್ಲ ವಿಷಯಗಳನ್ನು ಓದಿ ಬದಲಾವಣೆ ತಂದುಕೊಳ್ಳಬೇಕು. ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಅವರು ‘ವಿಜಯವಾಣಿ’ ಪತ್ರಿಕೆಯನ್ನು ರಾಜ್ಯದ ನಂಬರ್ 1 ಪತ್ರಿಕೆಯನ್ನಾಗಿಸಿದ್ದು, ರಾಜ್ಯದೆಲ್ಲೆಡೆ ಲಕ್ಷಾಂತರ ಪ್ರಸಾರ ಹೊಂದಿದೆ. ಡಾ.ವಿಜಯ ಸಂಕೇಶ್ವರ ಅವರ ಸಾಧನೆ ಮಹತ್ವದ್ದಾಗಿದೆ ಎಂದರು.
ಬಿಜೆಪಿ ಮುಂಡರಗಿ ಮಂಡಲ ಅಧ್ಯಕ್ಷ ಹೇಮಗಿರೀಶ ಹಾವಿನಾಳ, ತಾಲೂಕು ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಡಿ.ಡಿ.ಮೋರನಾಳ, ಪುರಸಭೆ ಸದಸ್ಯ ಲಿಂಗರಾಜಗೌಡ ಪಾಟೀಲ, ಸಂಘದ ಜಿಲ್ಲಾಧ್ಯಕ್ಷ ರಾಜು ಹೆಬ್ಬಳ್ಳಿ ಮಾತನಾಡಿದರು. ತಾಲೂಕು ಘಟಕದ ಅಧ್ಯಕ್ಷ ಹು.ಬಾ. ವಡ್ಡಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತರಾದ ಸಂತೋಷ ಮುರಡಿ, ಸಿ.ಕೆ. ಗಣಪ್ಪನವರ, ಶರಣು ಸೊಲಗಿ, ಕವಿ ಬಂಕಾಪುರ, ಶಿವು ಹೊಂಬಳಗಟ್ಟಿ, ಮಂಜುನಾಥ ಜಾಗಟಗೇರಿ, ಲಕ್ಷ್ಮಣ ದೊಡ್ಡಮನಿ, ರಿಯಾಜ್ ದೊಡ್ಡಮನಿ, ವಿಜಯ ಸೊರಟೂರ ಇತರರು ಇದ್ದರು. ಕಾಶಿನಾಥ ಬಿಳಿಮಗ್ಗದ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯ ಸಿ.ಎಸ್. ಅರಸನಾಳ ಸ್ವಾಗತಿಸಿದರು. ಪ್ರಶಿಕ್ಷಣಾರ್ಥಿಗಳಾದ ಅನ್ನಪೂರ್ಣ ಮೂಲಿಮನಿ, ಶಿವಕುಮಾರ ಹಳ್ಳಿಗುಡಿ ಕಾರ್ಯಕ್ರಮ ನಿರೂಪಿಸಿದರು. ಎಂ.ಡಿ. ಪಾಟೀಲ ವಂದಿಸಿದರು.
ಮುಂಡರಗಿ ತಾಲೂಕಿನ ಪತ್ರಕರ್ತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶ್ರೀಮಠದಿಂದ ಒಂದು ಲಕ್ಷ ರೂಪಾಯಿಯನ್ನು ಪತ್ರಕರ್ತರ ಸಂಘಕ್ಕಾಗಿ ಠೇವಣಿ ಮಾಡಲಾಗುವುದು. ಅದರಿಂದ ಬರುವ ಬಡ್ಡಿ ಹಣದಲ್ಲಿ ಪ್ರತಿವರ್ಷ ಓರ್ವ ಕ್ರಿಯಾಶೀಲ ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ನಾಡೋಜ ಡಾ.ಅನ್ನದಾನೀಶ್ವರ ಸ್ವಾಮೀಜಿ