ಚಿಕ್ಕೋಡಿ: ತಾಲೂಕಿನ ನಾಗರಮುನ್ನೋಳ್ಳಿ ಹೋಬಳಿ ವ್ಯಾಪ್ತಿಯಲ್ಲಿನ ಬಹುದಿನಗಳ ಬೇಡಿಕೆಯಾದ ಕರಗಾಂವ ಏತ ನೀರಾವರಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಶಾಸಕ ದುರ್ಯೋಧನ ಐಹೊಳೆ ಹೇಳಿದರು.
ತಾಲೂಕಿನ ಬೆಳಕೂಡ ಹಾಗೂ ನಾಗರಮುನ್ನೋಳ್ಳಿ ಗ್ರಾಮದಲ್ಲಿ ಎಸ್‌ಸಿಪಿಟಿಎಸ್ ಯೋಜನೆಯಡಿ 60 ಲಕ್ಷ ರೂ. ಅನುದಾನದಲ್ಲಿ ರಸ್ತೆ, ಚರಂಡಿ ನಿರ್ಮಾಣ ಹಾಗೂ ನಾಗರಮುನ್ನೋಳ್ಳಿ ಗ್ರಾಮದಲ್ಲಿ 5 ಲಕ್ಷ ರೂ.ಗಳಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿ, ರಾಯಬಾಗ ವಿಧಾನಸಭೆ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಮೂಲ ಸೌಲಭ್ಯಗಳಾದ ಕುಡಿಯುವ ನೀರು, ಚರಂಡಿ, ಸಿಸಿ ರಸ್ತೆಗಳ ನಿರ್ಮಾಣ ಹಾಗೂ ನೀರಾವರಿ ವಂಚಿತ ಈ ಕ್ಷೇತ್ರದ ಅಭಿವೃದ್ಧಿಗೆ ಬದ್ಧರಾಗಿದ್ದೇವೆ ಎಂದರು.ಗ್ರಾಮದ ನಿವೃತ್ತ ಶಿಕ್ಷಕ ಚಂದ್ರಶೇಖರ ಅರಭಾಂವಿ
ಮಾತನಾಡಿ, ಗ್ರಾಮದಲ್ಲಿ ಮೂಲ ಸೌಲಭ್ಯಗಳನ್ನು ಈಡೇರಿಸುವಲ್ಲಿ ಶಾಸಕ ಡಿ.ಎಂ.ಐಹೊಳೆ ಮುಂಚೂಣಿಯಲ್ಲಿದ್ದಾರೆ ಎಂದರು.
ಗ್ರಾಪಂ ಮಾಜಿ ಅಧ್ಯಕ್ಷ ಬಸವರಾಜ ಕುಂಬಾರ, ದೇವರಾಜ ಪಾಶ್ಚಾಪೂರೆ, ಮಹಾಂತೇಶ ಯಶವಂತ, ಮಹಾಂತೇಶ ಚವ್ಹಾಣ, ಸಂಭಾಜಿ ಚವ್ಹಾಣ, ಮಲ್ಲು ಅರಭಾಂವಿ, ನಟರಾಜ ಹಿರೇಮಠ, ಮಹಾದೇವ ಪಾಮದಿನ್ನಿ, ಬಸವಣ್ಣಿ ರಾಳೆ, ಪ್ರವೀಣ ಹಿರೇಮಠ ಇತರರಿದ್ದರು.