ಮಂಡ್ಯ: ಉಪಲೋಕಾಯುಕ್ತ ಬಿ.ವೀರಪ್ಪ ಅವರು ಮೇ 26 ರಿಂದ 29ರವರಿಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
28 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಹಾಗೂ 2.30ರಿಂದ ಸಂಜೆ 5 ಗಂಟೆವರೆಗೆ ನಗರದ ಸುಭಾಷ್‌ನಗರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕ ಕುಂದುಕೊರತೆ ಆಲಿಸಲಿದ್ದಾರೆ.
ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ, ನೌಕರರಿಂದ ಕಾನೂನು ರೀತಿ ನಿರ್ವಹಿಸಬೇಕಾದ ಕೆಲಸದಲ್ಲಿ ವಿಳಂಬವಾಗಿದ್ದರೆ ಅಥವಾ ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ಕಾರಣವಿಲ್ಲದೇ ತೊಂದರೆ ಕೊಡುವುದು, ಲಂಚಕ್ಕೆ ಬೇಡಿಕೆ ಇಡುವುದು, ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ ಅಂದು ದೂರು ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.