ಜಿಲ್ಲೆ

ಹೊರಗುತ್ತಿಗೆ ಆಧಾರದ ಮೇಲೆ ಕಾನೂನು ಸಲಹೆಗಾರರ ನೇಮಕಾತಿ

ಮೈಸೂರು: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಜಿಲ್ಲಾಧಿಕಾರಿಗಳಿಗೆ ಭೂ ಸ್ವಾಧೀನ ಹಾಗೂ ಇತರೆ ನ್ಯಾಯಾಲಯದ ಪ್ರಕರಣಗಳಲ್ಲಿ ಕಾನೂನು ಸಲಹೆ ನೀಡಲು ಪ್ರತಿ ಜಿಲ್ಲೆಗೆ ತಲಾ ಒಂದರoತೆ 30 ಕಾನೂನು ಸಲಹೆಗಾರರ ಹುದ್ದೆಗಳನ್ನು ಹೊರ ಗುತ್ತಿಗೆ ಆಧಾರದಲ್ಲಿ ನೇಮಕಾತಿಯನ್ನು ನಡೆಸಲಾಗುತ್ತದೆ.

ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ನಿವೃತ್ತ ಜಿಲ್ಲಾ ನ್ಯಾಯಾಧೀಶರು/ ನಿವೃತ್ತ ಕಂದಾಯ ಇಲಾಖೆಯ ವಿಶೇಷ ಜಿಲ್ಲಾಧಿಕಾರಿ ಅಥವಾ ಕಂದಾಯ ಇಲಾಖೆಯ ನಿವೃತ್ತ ತಹಶೀಲ್ದಾರ್/ಉಪ ತಹಶೀಲ್ದಾರ್‌ರವರನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು.

ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ತಮ್ಮ ಪೂರ್ಣ ಮಾಹಿತಿ (Bio-data) ವಿವರದೊಂದಿಗೆ ಅರ್ಜಿಯನ್ನು ಮೈಸೂರು ಜಿಲ್ಲಾಧಿಕಾರಿಗಳ ಕಛೇರಿಯ ವಿಳಾಸಕ್ಕೆ ಜೂನ್ 27 ರೊಳಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ:0821-2424079, 2422302 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪಿ.ಶಿವರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.