ಜಿಲ್ಲೆ

ಸಂಪನ್ಮೂಲ ಶಿಕ್ಷಕರ ಹುದ್ದೆಗೆ ನೇಮಕ: ಅರ್ಹರು ಜೂ.26ರೊಳಗೆ ಅರ್ಜಿ ಸಲ್ಲಿಸಿ

ಮಂಡ್ಯ: ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಅಂಗವಿಕಲ ಮಕ್ಕಳ ಶಿಕ್ಷಣದ ಮಧ್ಯವರ್ತನೆಗಳನ್ನು ಅನುಷ್ಠಾನಗೊಳಿಸಲು 2025-26ನೇ ಸಾಲಿನಲ್ಲಿ ಜಿಲ್ಲೆಯ 8 ಬ್ಲಾಕ್‌ನ ಸಂಪನ್ಮೂಲ ಕೇಂದ್ರಗಳಲ್ಲಿ ಖಾಲಿ ಇರುವ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರ (ಪ್ರಾಥಮಿಕ-4 ಹಾಗೂ ಪ್ರೌಢ-15) ಹುದ್ದೆಗಳನ್ನು ನೇರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ 2026 ರ ಮೇ.31ವರೆಗೆ ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಸಮಗ್ರ ಶಿಕ್ಷಣ ಕರ್ನಾಟಕ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಯಿಂದ ಅರ್ಜಿ ಪಡೆದು ಜೂ.26ರೊಳಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.