ಮಂಗಳೂರು : ಅರ್ಪಣಾ ಮನೋಭಾವದಿಂದ ದುಡಿಯುವ ಸಿಬ್ಬಂದಿ ವರ್ಗವಿದ್ದರೆ ಯಾವುದೇ ಸಂಸ್ಥೆ ಅಭಿವೃದ್ಧಿ
ಹೊಂದಲು ಸಾಧ್ಯವಿದೆ. ಸಿಬ್ಭಂದಿಗೆ ಕಚೇರಿಯಲ್ಲಿ ಒತ್ತಡ ರಹಿತ ಹಾಗೂ ಒಳ್ಳೆಯ ವಾತಾವರಣ ಕಲ್ಪಿಸುವುದು ಆಡಳಿತ ಮಂಡಳಿಯ ಜವಾಬ್ದಾರಿ ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್‌ಸಿಎ ಶಾಂತರಾಮ ಶೆಟ್ಟಿ ಹೇಳಿದರು.
ರೆಡ್‌ಕ್ರಾಸ್ ಸೊಸೈಟಿಯ ಸಿಬ್ಬಂದಿಗೆ ನಗರದ ಕೆನರಾ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಿದ್ದ ಪುನಃಶ್ಚೇತನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ ಇಂದು ರಾಜ್ಯದ ಮುಂಚೂಣಿಯ ಘಟಕವಾಗಿ ಗುರುತಿಸಿಕೊಂಡಿದ್ದರೆ ಇದರ ಹಿನ್ನೆಲೆಯಲ್ಲಿ ಸಿಬ್ಬಂದಿ ವರ್ಗದ ಅಪಾರ ಪರಿಶ್ರಮ ಇದೆ ಎಂದರು.
ರೆಡ್‌ಕ್ರಾಸ್ ಸೊಸೈಟಿಯ ಮಹಿಳಾ ಮತ್ತು ಮಕ್ಕಳ ಸುರಕ್ಷಾ ಉಪ ಸಮಿತಿಯ ನಿರ್ದೇಶಕಿ ಡಾ.ಸುಮನಾ ಬೋಳಾರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಇದೇ ಸಂದರ್ಭ ಮಂಗಳೂರು ವಿ.ವಿ. ಯೂತ್ ರೆಡ್‌ಕ್ರಾಸ್‌ನ ನಿಕಟಪೂರ್ವ ನೋಡಲ್ ಅಧಿಕಾರಿ ಡಾ.ಗಣಪತಿ ಗೌಡ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ರೆಡ್‌ಕ್ರಾಸ್ ಆಡಳಿತ ಮಂಡಳಿ ಸದಸ್ಯ ಪಿ.ಬಿ.ಹರೀಶ್ ರೈ, ಮಂಗಳೂರು ವಿ.ವಿ.ಯಿಂದ ಡಾಕ್ಟರೇಟ್ ಪದವಿ ಪಡೆದ ಡಾ.ಸುಮನಾ ಬೋಳಾರ್ ಇವರುಗಳನ್ನು ಸನ್ಮಾನಿಸಲಾಯಿತು.
ರೆಡ್‌ಕ್ರಾಸ್‌ನ ಖಜಾಂಜಿ ಮೋಹನ್ ಶೆಟ್ಟಿ, ಆಡಳಿತ ಮಂಡಳಿ ಸದಸ್ಯರಾದ ಯತೀಶ್ ಬೈಕಂಪಾಡಿ, ಡಾ.ಸಚ್ಚಿದಾನಂದ ರೈ, ಗುರುದತ್ ಕಾಮತ್, ಗೌರವ ಸಲಹೆಗಾರರಾದ ಪ್ರಭಾಕರ ಶರ್ಮ, ರವೀಂದ್ರನಾಥ ಉಚ್ಚಿಲ, ಸಚೇತ್ ಸುವರ್ಣ, ವೈದ್ಯಾಧಿಕಾರಿ ಡಾ.ಚಾಂದಿನಿ ಭಂಡಾರಿ.ಪಿ. , ಮಂಗಳೂರು ವಿ.ವಿ. ಯೂತ್ ರೆಡ್‌ಕ್ರಾಸ್‌ನ ನೋಡಲ್ ಅಧಿಕಾರಿ ಡಾ.ಗಾಯತ್ರಿ ಉಪಸ್ಥಿತರಿದ್ದರು. ರೆಡ್‌ಕ್ರಾಸ್ ಕಾರ್ಯದರ್ಶಿ ಸಂಜಯ ಶೆಟ್ಟಿ ವಂದಿಸಿದರು. ಪಿ.ಬಿ.ಹರೀಶ್ ರೈ ಕಾರ್ಯಕ್ರಮ ನಿರೂಪಿಸಿದರು.
............