ಜಿಲ್ಲೆ

ರೆಡ್‌ಕ್ರಾಸ್‌ನಿಂದ ನಾಗರಿಕ ಸುರಕ್ಷಾ ತರಬೇತಿ : ರೆಡ್‌ಕ್ರಾಸ್ ರಾಜ್ಯ ಉಪಾಧ್ಯಕ್ಷ ಭಾಸ್ಕರ ರಾವ್

Mangaluru - Hariprasad Rai



ಮಂಗಳೂರು : ಸಮಾಜಮುಖಿ ಸೇವೆಗೆ ಇಡೀ ವಿಶ್ವದಲ್ಲೇ ರೆಡ್‌ಕ್ರಾಸ್ ಸಂಸ್ಥೆ ಅತ್ಯುತ್ತಮ ವೇದಿಕೆಯಾಗಿದೆ. ನಾಗರಿಕರ ಸುರಕ್ಷತೆಗೆ ರೆಡ್‌ಕ್ರಾಸ್ ವಿಶೇಷ ಅದ್ಯತೆ ನೀಡಿದ್ದು ಮುಂದಿನ ದಿನಗಳಲ್ಲಿ ರೆಡ್‌ಕ್ರಾಸ್ ಮೂಲಕ ನಾಗರಿಕ ಸುರಕ್ಷಾ ತರಬೇತಿ ನೀಡಲು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ರೆಡ್‌ಕ್ರಾಸ್ ಸಂಸ್ಥೆಯ ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷ , ನಿವೃತ್ತ ಎಡಿಜಿಪಿ ಭಾಸ್ಕರ ರಾವ್
ಹೇಳಿದರು.
ಸೋಮವಾರ ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಕಚೇರಿಗೆ ಭೇಟಿ ನೀಡಿದ ಸಂದರ್ಭ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕ ರಾಜ್ಯದ ಅತ್ಯುತ್ತಮ ಘಟಕಗಳಲ್ಲಿ ಒಂದಾಗಿದ್ದು, ಭವ್ಯ ಕಟ್ಟಡ ಸಹಿತ ಉತ್ತಮ ಮೂಲಭೂತ ಸೌಲಭ್ಯ ಹೊಂದಿದೆ ಎಂದರು.
ಉದ್ಘಾಟನೆಗೆ ಸಿದ್ದವಾಗಿರುವ ದ.ಕ.ಜಿಲ್ಲಾ ಘಟಕದ ಶತಮಾನೋತ್ಸವ ಕಟ್ಟಡವನ್ನು ವೀಕ್ಷಿಸಿ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು.
ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅವರು ಸಂಸ್ಥೆಯ ಕಾರ್ಯಚಟವಟಿಕೆಗಳ ವಿವರ ನಿಡಿದರು.
ನಿವೃತ್ತ ಅಪರ ಜಿಲ್ಲಾಧಿಕಾರಿ ಎಸ್.ಎ.ಪ್ರಭಾಕರ ಶರ್ಮ , ರೆಡ್‌ಕ್ರಾಸ್ ಜಿಲ್ಲಾ ಘಟಕದ ನಿರ್ದೇಶಕರಾದ ಯತೀಶ್ ಬೈಕಂಪಾಡಿ, ಡಾ.ಸಚ್ಚಿದಾನಂದ ರೈ, ಪುಷ್ಪರಾಜ್ ಜೈನ್, ಗುರುದತ್ ಕಾಮತ್, ಪಿ.ಬಿ.ಹರೀಶ್ ರೈ, ಸಿಬ್ಬಂದಿ ಮಲ್ಲಿಕಾ, ಅನಿತಾ, ಗಿರೀಶ್ ಕುಮಾರ್ ಉಪಸ್ಥಿತರಿದ್ದರು. ಜಿಲ್ಲಾ ಘಟಕದ ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.