ಜಿಲ್ಲೆ

ರೆಡ್‌ಕ್ರಾಸ್‌ನಿಂದ ಜಿನಿವಾ ಒಪ್ಪಂದ ದಿನಾಚರಣೆ

Mangaluru - Hariprasad Rai

ಮಂಗಳೂರು : ಯುದ್ಧ ಗಾಯಾಳುಗಳನ್ನು ಹಾಗೂ ಯುದ್ಧ ಕೈದಿಗಳನ್ನು ಮಾನವೀಯತೆಯ ತಳಹದಿಯಲ್ಲಿ ಕಾಪಾಡುವುದು ಎಲ್ಲ ರಾಷ್ಟ್ರಗಳ ಕರ್ತವ್ಯ. ಇಂತಹ ಮಹತ್ವದ ಉದ್ದೇಶವನ್ನು 1949ರ ಜಿನಿವಾ ಒಪ್ಪಂದ ಹೊಂದಿದೆ ಎಂದು ನಿವೃತ್ತ ಅಪರ ಜಿಲ್ಲಾಧಿಕಾರಿ ಎಸ್.ಎ.ಪ್ರಭಾಕರ ಶರ್ಮ ಹೇಳಿದರು.
ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ
ಸಭಾಂಗಣದಲ್ಲಿ ಮಂಗಳವಾರ ನಡೆದ ಜಿನಿವಾ ಒಪ್ಪಂದ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು
ಜಿನಿವಾ ಒಪ್ಪಂದಗಳು ಯುದ್ಧದ ಸಮಯದಲ್ಲಿ ಮಾನವೀಯತೆಯನ್ನು ಕಾಪಾಡುವಲ್ಲಿ ಇಂದಿಗೂ ಪ್ರಮುಖ ಪಾತ್ರವಹಿಸುತ್ತಿದೆ ಎಂದರು.
ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಖಜಾಂಜಿ ಕೆ.ಮೋಹನ್ ಶೆಟ್ಟಿ, ನಿರ್ದೇಶಕರಾದ ಯತೀಶ್ ಬೈಕಂಪಾಡಿ, ಡಾ.ಸಚ್ಚಿದಾನಂದ ರೈ, ಗುರುದತ್ ನಾಯಕ್, ಪಿ.ಬಿ.ಹರೀಶ್ ರೈ ಉಪಸ್ಥಿತರಿದ್ದರು.
ಮಂಗಳೂರು ವಿ.ವಿ. ಯೂತ್ ರೆಡ್‌ಕ್ರಾಸ್ ನೋಡಲ್ ಅಧಿಕಾರಿ ಡಾ.ಗಾಯತ್ರಿ.ಎನ್ . ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಲ್ಲಾ ಜಿಲ್ಲಾ ರೆಡ್‌ಕ್ರಾಸ್ ನಿರ್ದೇಶಕಿ ಡಾ.ಸುಮನಾ ಬೋಳಾರ್ ಕ್ವಿಝ್ ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲಾ ರೆಡ್‌ಕ್ರಾಸ್‌ನ ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ ಸ್ವಾಗತಿಸಿದರು. ಬೆಸೆಂಟ್ ಮಹಿಳಾ ಕಾಲೇಜಿನ ಯೂತ್ ರೆಡ್‌ಕ್ರಾಸ್ ಅಧಿಕಾರಿ ದೀಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.