ಮಂಗಳೂರು : ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ಸ್ವಯಂಪ್ರೇರಿತ ರಕ್ತದಾನ ಶಿಬಿರ ಸಹಿತ ವಿವಿಧ ಸಾಮಾಜಿಕ ಮತ್ತು ಮಾನವೀಯ ಚಟುವಟಿಕೆಗಳನ್ನು ನಡೆಸುತ್ತಿದೆ. ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಾಮಾಜಿಕ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು. ರಕ್ತದಾನ ಮಾಡುವ ಮೂಲಕ ಇನ್ನೊಂದು ಜೀವ ಉಳಿಸಲು ನೆರವಾಗಬೇಕು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ದ.ಕ. ಜಿಲ್ಲಾ ಶಾಖೆಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.
ನಗರದ ಮಣೇಲ್ ಶ್ರೀನಿವಾಸ್ ನಾಯಕ್ ಇನ್ಸ್‌ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಎಂಎಸ್‌ಎನ್‌ಐಎಂ)ನ ಯುವ ರೆಡ್‌ಕ್ರಾಸ್ ಘಟಕ ಉದ್ಘಾಟಿಸಿ ಅವರು ಮಾತನಾಡಿದರು. ಇದೇ ಸಂದರ್ಭ ರೆಡ್‌ಕ್ರಾಸ್ ದ.ಕ.ಜಿಲ್ಲಾ ಶಾಖೆಯ ಸಹಯೋಗದಲ್ಲಿ ಎಂಎಸ್‌ಎನ್‌ಐಎಂ ಸಂಸ್ಥೆಯ ಕ್ಯಾಂಪಸ್‌ನಲ್ಲಿ ರಕ್ತದಾನ ಶಿಬಿರ ನಡೆಯಿತು.
ಮಂಗಳೂರು ವಿಶ್ವವಿದ್ಯಾನಿಲಯದ ಯೂತ್ ರೆಡ್ ಕ್ರಾಸ್‌ನ ನೋಡಲ್ ಅಧಿಕಾರಿ ಡಾ.ಗಾಯತ್ರಿ ಎನ್., ರೆಡ್ ಕ್ರಾಸ್ ಸೊಸೈಟಿಯ ಬ್ಲಡ್ ಬ್ಯಾಂಕ್ ಸಂಯೋಜಕ ಪ್ರವೀಣ್ ಕುಮಾರ್ ಮುಖ್ಯ ಅತಿಥಿಗಳಾಗಿದ್ದರು. ಮಹಿಳಾ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಣೇಲ್ ಅಣ್ಣಪ್ಪ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ನಿರ್ದೇಶಕಿ ಡಾ. ಮೊಲ್ಲಿ ಎಸ್. ಚೌಧುರಿ, ಬೆಸೆಂಟ್ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ದೀಕ್ಷಿತಾ ,ಕಾರ್ಯಕ್ರಮದ ಅಧ್ಯಾಪಕ ಸಂಯೋಜಕ ಸುರೇಶ್ ಶೆಣೈ ಉಪಸ್ಥಿತರಿದ್ದರು.
ಅನುಶ್ರೀ ಸ್ವಾಗತಿಸಿ, ಅಪರ್ಣಾ ಶೆಣೈ ವಂದಿಸಿದರು. ಶಾರಣ್ಯ ಕಾರ್ಯಕ್ರಮ ನಿರೂಪಿಸಿದರು.