ಲಕ್ಷೆ್ಮೕಶ್ವರ: ಕೆಸ್ಆರ್ಟಿಸಿ ಬಸ್ ಟಿಕೆಟ್ ದರವನ್ನು ಅವೈಜ್ಞಾನಿಕವಾಗಿ ಏರಿಸಿರುವುದನ್ನು ವಿರೋಧಿಸಿ ಸೋಮವಾರ ಪಟ್ಟಣದ ಬಸ್ ನಿಲ್ದಾಣದ ಎದುರು ಎಬಿವಿಪಿ ಕಾರ್ಯಕರ್ತರು ಮಾನವ ಸರಪಳಿ ನಿರ್ವಿುಸಿ ಪ್ರತಿಭಟನೆ ನಡೆಸಿದರು.
ರಾಜ್ಯ ಕಾರ್ಯಕಾರಿಣಿ ಸದಸ್ಯ ಅಭಿಷೇಕ ಉಮಚಗಿ ಮಾತನಾಡಿ, ರಾಜ್ಯ ಸರ್ಕಾರ ಏರಿಸಬೇಕಿರುವುದು ಬಸ್ ಟಿಕೆಟ್ ದರವನ್ನಲ್ಲ, ಬದಲಿಗೆ ಬಸ್ಗಳ ಸಂಖ್ಯೆ ಹೆಚ್ಚಿಸಿ ಶಾಲೆ-ಕಾಲೇಜ್ ವಿದ್ಯಾರ್ಥಿಗಳಿಗಾಗುತ್ತಿರುವ ತೊಂದರೆ ತಪ್ಪಿಸಬೇಕು. ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಯ ಹೆಸರಿನಲ್ಲಿ ಜನರನ್ನು ಸುಲಿಗೆ ಮಾಡುತ್ತಿದೆ. ಏರಿಕೆ ಮಾಡಿರುವ ಬಸ್ ಪ್ರಯಾಣ ದರವನ್ನು ಸರ್ಕಾರ ಈ ಕೂಡಲೆ ಹಿಂಪಡೆಯಬೇಕು. ಇಲ್ಲದಿದ್ದರೆ ರಾಜ್ಯ ಎಬಿವಿಪಿ ವತಿಯಿಂದ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ವಾಸುದೇವ ಸ್ವಾಮಿ ಮನವಿ ಸ್ವೀಕರಿಸಿ ಮಾತನಾಡಿ, ನೀವು ಸಲ್ಲಿಸಿರುವ ಮನವಿಯನ್ನು ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು. ತಾಲೂಕು ಸಂಚಾಲಕ ಪ್ರಕಾಶ ಕುಂಬಾರ, ಸಹ ಸಂಚಾಲಕ ವಿನಯ ಸಪಡ್ಲ, ನಗರ ಕಾರ್ಯದರ್ಶಿ ಅಭಿಷೇಕ ಉಮಚಗಿ, ಸಹ ಕಾರ್ಯದರ್ಶಿ ಯಶವಂತ ಶಿರಹಟ್ಟಿ, ಹೋರಾಟ ಪ್ರಮುಖ ಮನೋಜ ತಂಡಗೇರ, ಎಸ್ಟಿಎಫ್ ಪ್ರಮುಖ ವಿನಾಯಕ ಕುಂಬಾರ, ಅಭಿಷೇಕ ಇಸನಗೌಡರ್, ಕಾರ್ಯಕರ್ತರಾದ ವಿನಾಯಕ ಹುಂಬಿ, ಅರವಿಂದ ಇಚಾಂಗಿ, ಯುವರಾಜ ದುರ್ಗದ, ಈರಣ್ಣ ಕುಂಬಾರ, ಸಹ ಕಾರ್ಯದರ್ಶಿ ಕಿರಣ ಗುಡಗೇರಿ ಹಾಗೂ ಕಾರ್ಯಕರ್ತರು ಸೇರಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.