ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಭೇಟಿ ನೀಡಿ ಈ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಪರಿಶೀಲಿಸಿದರು. ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.. 
ಜಿಲ್ಲೆ

ಗೃಹಲಕ್ಷ್ಮಿಯೋಜನೆಗೆ ನೋಂದಣಿ ಪ್ರಕ್ರಿಯೆ ವೀಕ್ಷಣೆ

Mangaluru - Shravan Kumar Nala

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಗೃಹಲಕ್ಷ್ಮಿಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಯೋಜನೆಯಡಿ ನೋಂದಣಿಗಾಗಿ 9 ಕೇಂದ್ರಗಳನ್ನು ತೆರೆಯಲಾಗಿದೆ. ಮೂರು ವಲಯ ಕಚೇರಿಗಳಲ್ಲಿ 6 ಕೇಂದ್ರಗಳು ಆರಂಭವಾಗಿವೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಗುರುವಾರ ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಭೇಟಿ ನೀಡಿ ಈ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಪರಿಶೀಲಿಸಿದರು. ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.