ಜಿಲ್ಲೆ

ಎಲ್ಲ ಅರ್ಹರಿಗೆ ಪಂಚ ಗ್ಯಾರಂಟಿ : ಭರತ್ ಮುಂಡೋಡಿ ಆಶ್ವಾಸನೆ

ಸೌಮ್ಯ ಆರ್

ಸುಳ್ಯ: ಸರ್ಕಾರ ಘೋಷಿಸಿದ ಪಂಚ ಗ್ಯಾರಂಟಿ ಕೆಲವೊಂದು ತಾಂತ್ರಿಕ ಸಮಸ್ಯೆಗಳಿಂದ ಕೆಲವು ಜನರಿಗೆ ಗ್ಯಾರಂಟಿ ಯೋಜನೆಯ ಪ್ರಯೋಜನ ದೊರಕುತ್ತಿಲ್ಲ. ಇದು ರಾಜ್ಯಮಟ್ಟದಲ್ಲಿ ಇರುವ ಸಮಸ್ಯೆ. ಇದರ ಪರಿಹಾರಕ್ಕೆ ಪ್ರಾಮಾಣಿಕವಾದ ಪ್ರಯತ್ನ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಅರ್ಹರಾದ ಎಲ್ಲರಿಗೂ ಗ್ಯಾರಂಟಿ ಯೋಜನೆಗಳು ದೊರಕಲಿವೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಹೇಳಿದರು.

ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಹಾಗೂ ಪಟ್ಟಣ ಪಂಚಾಯಿತಿ ಸುಳ್ಯ ಆಶ್ರಯದಲ್ಲಿ, ಸುಳ್ಯ ನಗರ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ನೋಂದಣಿ ಬಾಕಿ ಇರುವ ಹಾಗೂ ತಿರಸ್ಕೃತ ಅರ್ಜಿ ವಿಲೇವಾರಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಅಧ್ಯಕ್ಷತೆ ವಹಿಸಿ ಮಾತನಾಡಿ, 18 ತಿಂಗಳಲ್ಲಿ ಪಂಚ ಗ್ಯಾರಂಟಿ ಯೋಜನೆಯಲ್ಲಿ ಸುಳ್ಯ ತಾಲೂಕಿಗೆ 183 ಕೋಟಿ ರೂ. ಬಂದಿದೆ ಎಂದರು.

ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫಾ, ನಗರ ಪಂಚಾಯಿತಿ ಸದಸ್ಯರಾದ ಎಂ.ವೆಂಕಪ್ಪ ಗೌಡ, ಶರೀಫ್ ಕಂಠಿ, ಧೀರಾ ಕ್ರಾಸ್ತಾ, ಸಿದ್ದಿಕ್ ಕೊಕ್ಕೊ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಭವಾನಿಶಂಕರ ಕಲ್ಮಡ್ಕ, ಜ್ಞಾನಶೀಲನ್ ನೆಲ್ಲಿಕುಮೇರಿ, ಲತೀಫ್ ಅಡ್ಕಾರ್, ನಗರ ಪಂಚಾಯಿತಿ ಮುಖ್ಯಾಧಿಕಾರಿ ಸುಧಾಕರ ಎಂ.ಎಚ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಜಾ ದಿನೇಶ್ ಉಪಸ್ಥಿತರಿದ್ದರು. ಅಧಿಕಾರಿಗಳು ಪಂಚ ಗ್ಯಾರಂಟಿ ಯೋಜನೆ ಪ್ರಗತಿ ವಿವರ ನೀಡಿದರು. ಬಳಿಕ ಫಲಾನುಭವಿಗಳ ವಿವಿಧ ಅರ್ಜಿ ವಿಲೇವಾರಿ ನಡೆಯಿತು.