ಜಿಲ್ಲೆ

ಗರಗ ಗ್ರಾ.ಪಂ.ಗೆ ಅಧ್ಯಕ್ಷ- ಉಪಾಧ್ಯಕ್ಷ ಅವಿರೋಧ ಆಯ್ಕೆ

ಮಂಜುನಾಥ ಅಂಗಡಿ

ಧಾರವಾಡ: ತಾಲೂಕಿನ ಗರಗ ಗ್ರಾಮ ಪಂಚಾಯಿತಿಯ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಚುನಾವಣೆ ಬುಧವಾರ ನಡೆಯಿತು. 27 ಸದಸ್ಯ ಬಲದ ಪಂಚಾಯಿತಿಯಲ್ಲಿ ಅ ವರ್ಗ ಮಹಿಳೆಗೆ ಮೀಸಲಿದ್ದ ಅಧ್ಯಕ್ಷ ಸ್ಥಾನಕ್ಕೆ ರೇಖಾ ಜಗದೀಶ ದಳವಾಯಿ ಮತ್ತು ಬ ವರ್ಗಕ್ಕೆ ಮೀಸಲಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಶಿವಾನಂದ ನಿಂಗಪ್ಪ ಉಳವಣ್ಣವರ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ೋಷಿಸಲಾಯಿತು. ಎಸ್.ಎನ್. ಗೌಡರ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಪಿಡಿಒ ಗಂಗಾಧರ ಗಂಧದ, ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.