ರಾಯಚೂರು: ರಾಮ ಮಂದಿರ ನಿರ್ಮಾಣಕ್ಕಾಗಿ ಹೋರಾಟ ನಡೆದಿಸಿದ್ದ ರಾಮಭಕ್ತರನ್ನು ಸರ್ಕಾರ ಬಂಸಿರುವುದನ್ನು ಖಂಡಿಸಿ ಸ್ಥಳೀಯ ಜಿಲ್ಲಾಕಾರಿ ಕಚೇರಿ ಮುಂದೆ ಬಿಜೆಪಿ ಜಿಲ್ಲಾ ಘಟಕದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಮನವಿ ಸಲ್ಲಿಸಿ, ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿರುವಾಗ ರಾಜ್ಯ ಸರ್ಕಾರ 31 ವರ್ಷದ ಹಿಂದಿನ ಪ್ರಕರಣವನ್ನು ಕೆದಕಿ ರಾಮಭಕ್ತರನ್ನು ಬಂಸಿದೆ ಎಂದು ದೂರಿದರು.
ರಾಜ್ಯದಲ್ಲಿ ಕಾಂಗ್ರೆಸ್ ಹಿಂದು ವಿರೋ ನೀತಿಯನ್ನು ಅನುಸರಿಸುತ್ತಿದ್ದು, ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯ ಸಂಭ್ರಮ ದೇಶದಲ್ಲಿ ಮನೆ ಮಾಡಿರುವಾಗ ಮೂರು ದಶಕಗಳ ಹಿಂದಿನ ಪ್ರಕರಣವನ್ನು ಕೆದಕಿ ರಾಜ್ಯ ಸರ್ಕಾರ ಹಿಂದುಗಳ ಭಾವನೆಗಳಿಗೆ ಹಾನಿಯುಂಟು ಮಾಡುವ ಕೆಲಸ ಮಾಡುತ್ತಿದೆ.
ಕಾಂಗ್ರೆಸ್ ಸರ್ಕಾರ ಹಿಂದು ವಿರೋ ನೀತಿಗಳನ್ನು ಕೈಬಿಟ್ಟು, ಕೂಡಲೇ ಬಂಸಿರುವ ರಾಮಭಕ್ತರನ್ನು ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ದೇಶಾದ್ಯಂತ ಪಕ್ಷದಿಂದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಪ್ರತಿಭಟನೆಯಲ್ಲಿ ನಗರ ಶಾಸಕ ಡಾ.ಶಿವರಾಜ ಪಾಟೀಲ್, ಮಾಜಿ ಎಂಎಲ್ಸಿ ಎನ್.ಶಂಕ್ರಪ್ಪ, ಪಕ್ಷದ ಮುಖಂಡರಾದ ವೈ.ಗೋಪಾಲರೆಡ್ಡಿ, ಬಿ.ಗೋವಿಂದ, ಬಂಡೇಶ ವಲ್ಕಂದಿನ್ನಿ, ಈ.ಶಶಿರಾಜ, ರಾಜಕುಮಾರ, ಶಶಿರಾಜ ಮಸ್ಕಿ, ರಾಮಚಂದ್ರ ಕಡಗೋಲ, ಎ.ಚಂದ್ರಶೇಖರ, ಶಿವಕುಮಾರ ಪಾಟೀಲ್, ಯು.ಆಂಜಿನೇಯ, ವಿಜಯಕುಮಾರ ಸಜ್ಜನ್ ಪಾಲ್ಗೊಂಡಿದ್ದರು.