ಗೋಳಿಹೊಳೆ ಶಾರದೋತ್ಸವದ ಧಾರ್ಮಿಕ ಸಭೆಯಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.  
ಜಿಲ್ಲೆ

ಸನಾತನ ಆಚರಣೆಗಳಿಂದ ಧಾರ್ಮಿಕ ಪ್ರಜ್ಞೆ

ಇಂದಿರಾ ಎನ್ ಕೆ

ಬೈಂದೂರು: ಆಧುನಿಕ ಯುಗದಲ್ಲೂ ಗ್ರಾಮೀಣ ಭಾಗದ ಯುವಕರು ಸನಾತನ ಸಂಸ್ಕೃತಿ ಕಡೆಗಣಿಸದೇ ಧಾರ್ಮಿಕ ಆಚರಣೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಶ್ಲಾಘನೀಯ. ಗ್ರಾಮೀಣ ಪ್ರದೇಶದಲ್ಲಿ ಶಾರದೋತ್ಸವದಂತಹ ಆಚರಣೆಗಳ ಮೂಲಕ ಜನರಲ್ಲಿ ಧಾರ್ಮಿಕ ಪ್ರಜ್ಞೆ ಬೆಳೆಯಲು ಸಾಧ್ಯ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದರು.

ಗೋಳಿಹೊಳೆ ಶ್ರೀ ಬಿಳಿಶಿಲೆ ವಿನಾಯಕ ದೇವಾಲಯ ವಠಾರದಲ್ಲಿ ಸಾರ್ವಜನಿಕ ಶಾರದೋತ್ಸವ ಸಮಿತಿಯ 9ನೇ ವರ್ಷದ ಶಾರದೋತ್ಸವ ಪ್ರಯುಕ್ತ ಶುಕ್ರವಾರ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕ್ಷೇತ್ರದ ಆಡಳಿತ ಮೋಕ್ತೇಸರ ಶಿವರಾಜ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ರಾಜ್ಯ ವಕ್ತಾರ ರತನ್ ರಮೇಶ ಪೂಜಾರಿ ಧಾರ್ಮಿಕ ಉಪನ್ಯಾಸ ನೀಡಿದರು. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಜತೆಗೆ ಸ್ಥಳೀಯ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು. ಗೋಳಿಹೊಳೆ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷ ರಘು ಪೂಜಾರಿ, ಶ್ರೀ ಬಿಳಿಶಿಲೆ ವಿನಾಯಕ ದೇವಳದ ಪ್ರಧಾನ ಅರ್ಚಕ ವಾಸುದೇವ ಹೊಳ್ಳ ಉಪಸ್ಥಿತರಿದ್ದರು. ಶೇಖರ ಪೂಜಾರಿ ಪ್ರಸ್ತಾವನೆಗೈದರು. ಸಂದೇಶ ಗೌಡ, ಉದಯ ಮರಾಠಿ ನಿರೂಪಿಸಿದರು.