ಗಂಗೊಳ್ಳಿ: ಭಗವಂತನ ಅನುಗ್ರಹವಿದ್ದರೆ ಜೀವನದಲ್ಲಿ ಯಶಸ್ಸು ಪ್ರಾಪ್ತಿಯಾಗುತ್ತದೆ ಎಂದು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಳ ಆಡಳಿತ ಧರ್ಮದರ್ಶಿ ಬಿ.ಅಪ್ಪಣ್ಣ ಹೆಗ್ಡೆ ಹೇಳಿದರು.
ಹೆಮ್ಮಾಡಿಯ ಶ್ರೀ ಲಕ್ಷ್ಮೀನಾರಾಯಣ ದೇವರ ನೂತನ ಶಿಲಾಮಯ ಗುಡಿ ಲೋಕಾರ್ಪಣೆ, ಪುನಃ ಪ್ರತಿಷ್ಠಾಪನೆ ಅಂಗವಾಗಿ ಭಾನುವಾರ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಿತಿ ಉಪಾಧ್ಯಕ್ಷ, ಉದ್ಯಮಿ ಎನ್.ಟಿ. ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಜೋತಿಷಿ ಸುಬ್ರಹ್ಮಣ್ಯ ಭಟ್ ಗುಂಡಿಬೈಲು ಧಾರ್ಮಿಕ ಉಪನ್ಯಾಸ ನೀಡಿದರು. ಆನೆಗುಡ್ಡೆಯ ಶ್ರೀ ವಿನಾಯಕ ದೇವಸ್ಥಾನದ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಜನತಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಗಣೇಶ್ ಮೊಗವೀರ, ತಲ್ಲೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಧರ್ಮದರ್ಶಿ ವಸಂತ ಆರ್.ಹೆಗ್ಡೆ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಶೋಕಕುಮಾರ್ ಭಟ್, ಪ್ರಮುಖರಾದ ಜಗದೀಶ್ ಶೆಟ್ಟಿ ಕುದ್ರುಕೋಡು, ಉದ್ಯಮಿ ರಾಮ ಪೂಜಾರಿ ಹೆಮ್ಮಾಡಿ, ನರಸಿಂಹ ಆಚಾರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸತ್ಯನಾರಾಯಣ ರಾವ್ ಉಪಸ್ಥಿತರಿದ್ದರು.
ಕುಶಲ ಶೆಟ್ಟಿ ಸ್ವಾಗತಿಸಿದರು. ರಮೇಶ್ ಭಂಡಾರಿ ವಂದಿಸಿದರು. ಪತ್ರಕರ್ತ ಕೆ.ಸಿ.ರಾಜೇಶ್ ಪ್ರಸ್ತಾವನೆಗೈದರು. ದಾಮೋದರ ಶರ್ಮ ಕಾರ್ಯಕ್ರಮ ನಿರೂಪಿಸಿದರು.