ಜಿಲ್ಲೆ

ಘಂಟೆ ಗಣಪತಿ ದೇವಸ್ಥಾನದಲ್ಲಿ ಧಾರ್ವಿುಕ ಕಾರ್ಯಕ್ರಮ ಸಂಪನ್ನ

Gadag - Desk - Tippanna Avadoot

ಯಲ್ಲಾಪುರ: ತಾಲೂಕಿನ ಚಂದಗುಳಿ ಘಂಟೆ ಗಣಪತಿ ದೇವಸ್ಥಾನದಲ್ಲಿ ಅಷ್ಟಬಂಧ ಮಹೋತ್ಸವದ ಕೊನೆಯ ದಿನವಾದ ಸೋಮವಾರ ವಿವಿಧ ಧಾರ್ವಿುಕ ಕಾರ್ಯಕ್ರಮಗಳು ಸಂಪನ್ನಗೊಂಡವು.

ಗಣಪತಿ ಅಥರ್ವ ಶೀರ್ಷ ಹವನ ಹಾಗೂ ಶತರುದ್ರ ಹವನದ ಪೂರ್ಣಾಹುತಿ ನೆರವೇರಿಸಲಾಯಿತು. ಮಹಾಪೂಜೆ, ಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಸಾವಿರಾರು ಭಕ್ತರು ಪ್ರಸಾದ ಸ್ವೀಕರಿಸಿದರು. ಬಳಗಾರಿನ ಮಾತೆಯರಿಂದ ಭಜನಾ ಕಾರ್ಯಕ್ರಮ, ಭಗವದ್ಗೀತಾ ಪಠಣ ನಡೆಯಿತು. ಕಾರ್ಯಕ್ರಮದ ಪ್ರಯುಕ್ತ ಘಂಟೆ ಗಣಪನಿಗೆ ಮಾಡಲಾದ ವಿಶೇಷ ಅಲಂಕಾರ ಗಮನ ಸೆಳೆಯಿತು.