ವಿಜಯವಾಣಿ ಸುದ್ದಿಜಾಲ ಬಾಗೇಪಲ್ಲಿ
ತಾಲೂಕಿಗೆ ಪ್ರಧಾನಮಂತ್ರಿ ಆವಾಜ್ ಯೋಜನೆಯಡಿ ಮಂಜೂರಾಗಿರುವ 500 ವಸತಿಗಳ ಪೈಕಿ 310 ಮನೆಗಳಿಗೆ ಇಂದಿಗೂ ಪಲಾನುಭವಿಗಳ ಪಟ್ಟಿ ಸಿದ್ಧಪಡಿಸದೆ, ಜಿಪಿಎಸ್ ಮಾಡದಿದ್ದರೆ ವಸತಿ ಯೋಜನೆಯ ಗುರಿ ಸಾಧನೆ ಮಾಡುವುದು ಹೇಗೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಗ್ರಾಪಂ ಪಿಡಿಒಗಳಿಗೆ ತರಾಟೆಗೆ ತೆಗೆದುಕೊಂಡರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಆಯೋಜಿಸಿಸದ್ದ ತೆಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಇನ್ನು ಎರಡು ದಿನಗಳಲ್ಲಿ ಜಿಪಿಎಸ್ ಮಾಡಿ ಕಳುಹಿಸಬೇಕು ಎಂದು ಸೂಚನೆ ನೀಡಿದರು.
ಗೃಹಲಕ್ಷಿ$್ಮ, ಗೃಹಜ್ಯೋತಿ ಹಾಗೂ ಅನ್ನಭಾಗ್ಯ ಯೋಜನೆ ನೋಂದಣಿ ಹಾಗೂ ವಸತಿ ಯೋಜನೆ, ಯೂರಿಯಾ ಕೊರತೆ, ವೈದ್ಯರ ಕೊರತೆ, ಕುಡಿಯುವ ನೀರಿನ ಸಮಸ್ಯೆ, ಬೆಳಕು ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನ ಮತ್ತು ಪ್ರಗತಿ ಕುರಿತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.
ಕ್ರಿಮಿನಲ್ ಕೇಸ್ ದಾಖಲಿಸಿ:
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷಿ$್ಮ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಯ ಅನುಷ್ಠಾನದ ಬಗ್ಗೆ ಅಧಿಕಾರಿಗಳು ನಿತ್ಯ ನಿಗಾವಹಿಸಿ ಶೇ.100 ಗುರಿ ಸಾಧನೆ ಮಾಡಬೇಕು. ಗೃಹಲಕ್ಷಿ$್ಮ ಯೋಜನೆಯ ಅರ್ಜಿದಾರರಿಂದ ಗ್ರಾಮ ಒನ್ ಕೇಂದ್ರಗಳಲ್ಲಿ ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿದ್ದು, ಹಣ ವಸೂಲಿ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸುವಂತೆ ತಹಸೀಲ್ದಾರ್ ರಾಮಲಕ್ಷ$್ಮಯ್ಯ ಅವರಿಗೆ ಶಾಸಕರು ಸೂಚಿಸಿದರು.
ಗೊಬ್ಬರ ಅಭಾವ ಸರಿಯಲ್ಲ:
ತಾಲೂಕಿನ ಬಹುತೇಕ ರೈತರಿಗೆ ಯೂರಿಯಾ ಸಿಗುತ್ತಿಲ್ಲ ಎಂಬ ದೂರು ಕೇಳಿಬರುತ್ತಿದ್ದು, ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗುತ್ತಿದ್ದರೂ ರೈತರ ಬೇಡಿಕೆಗೆ ಪೂರಕವಾಗಿ ಯೂರಿಯಾ ದಾಸ್ತಾನು ಮಾಡಿಕೊಳ್ಳಲು ಸಾಧ್ಯವಾಗಲಿಲ್ಲವೇ ಎಂದು ಸಹಾಯಕ ಕೃಷಿ ನಿರ್ದೇಶಕ ಪ್ರಕಾಶ್ ಅವರನ್ನು ತರಾಟೆಗೆ ತೆಗೆದುಕೊಂಡ ಶಾಸಕರು, ಮುಂದಿನ ದಿನಗಳಲ್ಲಿ ಯೂರಿಯಾ ಕೊರತೆಯಾಗದಂತೆ ಎಚ್ಚರವಹಿಸಿ ಎಂದು ಸೂಚಿಸಿದರು.
ವಿದ್ಯುತ್ ಅವಡ ತಡೆಯಿರಿ
ತಾಲೂಕು ವ್ಯಾಪ್ತಿಯಲ್ಲಿರುವ ಅನಧಿಕೃತ ವಿದ್ಯುತ್ ಸಂಪರ್ಕಗಳಿಂದ ವಿದ್ಯುತ್ ಅವಘಡಗಳು ಸಂಭವಿಸುತ್ತಿರುವ ಹಿನ್ನೆಲೆ ದೀನ್ ದಯಾಳ್ ಉಪಾಧ್ಯಾಯ ಹಾಗೂ ಬೆಳಕು ಯೋಜನೆಯಡಿ ಅನಧಿಕೃತ ವಿದ್ಯುತ್ ಸಂಪರ್ಕಗಳನ್ನು ಸಕ್ರಮಗೊಳಿಸಿ ಗೃಹಜ್ಯೋತಿ ಯೋಜನೆಯನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸುವ ಮೂಲಕ ವಿದ್ಯುತ್ ಅವಘಡ ತಪ್ಪಿಸಬೇಕು. ತಾಲೂಕಿನಾದ್ಯಂತ ಹದಗೆಟ್ಟ ರಸ್ತೆಗಳ ದುರಸ್ತಿಗೆೆ ಅನುದಾನ ಮೀಸಲಿಟ್ಟು ಗುಂಡಿ ಮುಚ್ಚುವ ಕಾರ್ಯವಾಗಬೇಕು ಎಂದು ಲೋಕೋಪಯೋಗಿ ಮತ್ತು ಜಿಪಂ ಅಧಿಕಾರಿಗಳಿಗೆ ಸುಬ್ಬಾರೆಡ್ಡಿ ಸೂಚಿಸಿದರು.
ಬಾಗೇಪಲ್ಲಿ ಪಟ್ಟಣದ ಟಿ.ಬಿ.ಕ್ರಾಸ್ನಿಂದ ನ್ಯಾಷನಲ್ ಕಾಲೇಜುವರೆಗಿನ ಮುಖ್ಯರಸ್ತೆಯಲ್ಲಿ ವಾಹನಗಳನ್ನು ಅಡ್ಡಾದಿಡ್ಡಿ ನಿಲ್ಲಿಸಿ ಸಂಚಾರಕ್ಕೆ ತೀವ್ರ ಅಡ್ಡಿಯುಂಟುಮಾಡುತ್ತಿದ್ದರೂ ಅಧಿಕಾರಿಗಳು ಏಕೆ ಮೌನವಹಿಸಿದ್ದೀರಾ ಎಂದು ಪೊಲೀಸ್ ವೃತ್ತ ನಿರೀಕ್ಷಕ ರವಿಕುಮಾರ್, ಪುರಸಭೆ ಮುಖ್ಯಾಧಿಕಾರಿ ರುದ್ರಮ್ಮ ಶರಣಯ್ಯ ಅವರನ್ನು ಪ್ರಶ್ನಿಸಿದರು.
ಬಾಗೇಪಲ್ಲಿ ಪಟ್ಟಣ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಮಾರಾಟಕ್ಕೆ ಕಡಿವಾಣ ಹಾಕಿ ಪ್ಲಾಸ್ಟಿಕ್ ಮುಕ್ತ ಪಟ್ಟಣವನ್ನಾಗಿ ಮಾಡಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಪುರಸಭೆ ಅಧಿಕಾರಿಗಳಿಗೆ ಸೂಚಿಸಿದರು.
ಬಾಗೇಪಲ್ಲಿ ತಾಲೂಕಿನ ಜೂಲಪಾಳ್ಯ, ಪಾತಪಾಳ್ಯ, ಮಿಟ್ಟೇಮರಿ, ಚೇಳೂರು ತಾಲೂಕು ಕೇಂದ್ರದಲ್ಲಿರುವ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರಿಲ್ಲದ ಕಾರಣ ಆರೋಗ್ಯ ಸೇವೆ ಒದಗಿಸಲು ಕಷ್ಟವಾಗುತ್ತಿದೆ. ಖಾಲಿ ಇರುವ ವೈದ್ಯ ಹುದ್ದೆಗಳ ಭರ್ತಿ ಮಾಡಿಕೊಡಬೇಕು ಎಂದು ತಾಲೂಕು ವೈದ್ಯಾಧಿಕಾರಿ ಡಾ.ಸಿ.ಎನ್.ಸತ್ಯನಾರಾಯಣರೆಡ್ಡಿ ಶಾಸಕರ ಗಮನಕ್ಕೆ ತಂದರು. ಶ್ರೀ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಇತ್ಯರ್ಥಗೊಳಿಸುವುದಾಗಿ ಶಾಸಕರು ಭರವಸೆ ನೀಡಿದರು.
ಜಿಪಂ ಉಪ ಕಾರ್ಯದರ್ಶಿ ಡಾ.ಭಾಸ್ಕರ್, ತಹಸೀಲ್ದಾರ್ ರಾಮಲಕ್ಷ$್ಮಯ್ಯ, ತಾಪಂ ಇಒ ಎ.ಆನಂದ್, ಪೊಲೀಸ್ ವೃತ್ತ ನಿರೀಕ್ಷಕ ರವಿಕುಮಾರ್ ಇತರರು ಇದ್ದರು.