ಯಾದವಾಡ: ಸಮಾನತೆ ಮೌಲ್ಯ ಸಾರಿದ ಜಗದ್ಗುರು ಶ್ರೀ ರೇಣುಕಾಚಾರ್ಯರ ಕೊಡುಗೆ ಅಪಾರವಾಗಿದೆ. ವೀರಶೈವ ಧರ್ಮ ಪರಂಪರೆಗೆ ಸುದೀರ್ಘ ಇತಿಹಾಸವಿದೆ ಎಂದು ಸವದತ್ತಿ ಮೂಲಿಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಗ್ರಾಮದ ಶ್ರೀ ಹೊನ್ನಮ್ಮದೇವಿ ದೇವಸ್ಥಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶ್ರೀ ರೇಣುಕಾಚಾರ್ಯ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಬಾಗೋಜಿಕೊಪ್ಪದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು. ಸುಮಂಗಲೆಯರ ಕುಂಭ ಹಾಗೂ ಆರತಿಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀ ರೇಣುಕಾಚಾರ್ಯರ ಭಾವಚಿತ್ರ ಮೆರವಣಿಗೆ ಮಾಡಲಾಯಿತು.
ಡಾ.ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಬಸವಲಿಂಗ ಸ್ವಾಮೀಜಿ, ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಚೌಕಿಮಠದ ಸ್ವಾಮೀಜಿ, ಲಿಂಗಬಸಯ್ಯ ಹಿರೇಮಠ, ಸಂಗಯ್ಯ ವಿಭೂತಿ ಇತರರಿದ್ದರು.