ಜಿಲ್ಲೆ

ಫೋಟೋ ಲೀಕ್​ ಎಫೆಕ್ಟ್ ; ​ ಡಿ​​ ಗ್ಯಾಂಗ್​ನ ಬೇರೆ ಜೈಲಿಗೆ ಶಿಫ್ಟ್​​ ಮಾಡಲು ಸಿಎಂ ​ಸೂಚನೆ

ಬೆಂಗಳೂರು: ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಚಿತ್ರದುರ್ಗದ ಮೂಲದ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂದು ಸ್ಯಾಂಡಲ್​ವುಡ್ ನಟ ದರ್ಶನ್ ಆತನನ್ನು ಕೊಲೆ ಮಾಡಿದ್ದಾರೆ ಎನ್ನುವ ಆರೋಪದಲ್ಲಿ ಡಿ ಗ್ಯಾಂಗ್​ ಜೈಲಿನಲ್ಲಿದೆ. ಕೆಲವು ಫೋಟೋ ಹಾಗೂ ವಿಡಿಯೋಗಳು ಮತ್ತೊಂದು ಹಂತದಲ್ಲಿ ಸುದ್ದಿ ಮಾಡುತ್ತಿವೆ. ನಿನ್ನೆ ಒಂದು ಫೋಟೋ ವಿಡಿಯೋ ವೈರಲ್​​ ಆಗಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ್ದಾರೆ.

ಟ್ವೀಟ್​​ನಲ್ಲಿ ಏನಿದೆ?: ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ. ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಟ್ವೀಟ್​​ ಮಾಡಿದ್ದಾರೆ.

ಸಿದ್ದರಾಮಯ್ಯನವರು ದರ್ಶನ್​ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡಿ ಎಂದು DGIGP ಅಲೋಕ್ ಮೋಹನ್​ಗೆ ಸೂಚನೆ ನೀಡಿದ್ದಾರೆ. ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್​ ಮಾಡುವ ಸಾಧ್ಯತೆ ಇದೆ ಎನ್ನುವ ಸುದ್ದಿ ಇದೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್​​ ಅವರು ದರ್ಶನ್​ಗೆ ಜೈಲಿನಲ್ಲಿ ಆತಿಥ್ಯ ನೀಡಿದ್ದಕ್ಕೆ 7 ಅಧಿಕಾರಿಗಳನ್ನು ಅಮಾನತು ಮಾಡಲು ಸೂಚಿಸಿದ್ದಾರೆ.