ಜಿಲ್ಲೆ

ಸ್ವದೇಶಕ್ಕೆ ಆಗಮಿಸುವವರ ಮಾಹಿತಿ ನೀಡಿ- ಡಿಸಿ ಡಾ.ಎಸ್.ಬಿ. ಬೊಮ್ಮನಹಳ್ಳಿ

Belagavi

ಬೆಳಗಾವಿ: ಉದ್ಯೋಗ, ಶಿಕ್ಷಣ ಮತ್ತಿತರ ಕಾರಣಗಳಿಂದ ವಿದೇಶದಲ್ಲಿ ನೆಲೆಸಿರುವ ಜಿಲ್ಲೆಯ ನಿವಾಸಿಗಳು ಶೀಘ್ರ ಸ್ವದೇಶಕ್ಕೆ ಆಗಮಿಸುತ್ತಿದ್ದರೆ, ಅಂತಹವರ ಮಾಹಿತಿಯನ್ನು ಕುಟುಂಬಸ್ಥರು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಕೋರಿದ್ದಾರೆ.

ಕರೊನಾ ಸೋಂಕು ಹರಡದಂತೆ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸ್ವದೇಶಕ್ಕೆ ಆಗಮಿಸುವವರ ಹೆಸರು, ವಿಳಾಸ ಮತ್ತಿತರ ಮಾಹಿತಿಯನ್ನು ಕುಟುಂಬಸ್ಥರು ಜಿಲ್ಲಾಧಿಕಾರಿ ಕಚೇರಿ ಅಥವಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಕಚೇರಿಗೆ ಒದಗಿಸಬೇಕು. ದೂರವಾಣಿ ಸಂಖ್ಯೆ: 0831-2424284ಕ್ಕೆ ಕರೆ ಮಾಡಿ ಮಾಹಿತಿಯನ್ನು ನೀಡಬಹುದು ಎಂದು ತಿಳಿಸಿದ್ದಾರೆ.