ಜಿಲ್ಲೆ

ಕಲಬುರಗಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ : ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ

ಬಾಬುರಾವ ಯಡ್ರಾಮಿ

ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ 75ನೇ ಗಣರಾಜ್ಯೋತ್ಸವ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ಬೆಳಿಗ್ಗೆ ರಾಷ್ಟ್ರಧ್ಚಜಾರೋಹಣ ನೆರವೇರಿಸಿದರು.ಬಳಿಕ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಪೊಲೀಸ್ ಆಯುಕ್ತ ಚೇತನ, ಎಸ್ಪಿ ಎ.ಶ್ರೀನಿವಾಸುಲು, ಡಿಸಿಪಿ ಕನ್ನಿಕಾ ಸಿಕ್ರಿವಾಲ್, ಸಿಇಒ ಭನ್ವಂತರ ಸಿಂಗ್ ಮೀನಾ ಇತರರು ಇದ್ದರು.