ಬೆಳ್ತಂಗಡಿ: ಕೇಂದ್ರ ಸರ್ಕಾರದ ಪ್ರಸಾದಂ ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಅನುದಾನ ಒದಗಿಸುವಂತೆ,ನವದೆಹಲಿಯಲ್ಲಿ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಸಂಸದ ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮನವಿ ಸಲ್ಲಿಸಿದರು.
ಬೆಳ್ತಂಗಡಿ ತಾಲೂಕಿನ ಶ್ರೀ ನಂದಿಕೇಶ್ವರ ದೇವಸ್ಥಾನ ನಂದಿಬೆಟ್ಟ ಗರ್ಡಾಡಿ, ಬೆಳ್ತಂಗಡಿ ತಾಲ್ಲೂಕಿನ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಬೆಳ್ತಂಗಡಿ ತಾಲೂಕಿನ ಶ್ರೀ ಶಿಶಿಲೇಶ್ವರ ದೇವಸ್ಥಾನ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಹಾಗೂ ಶ್ರೀ ತೋಡಿಕ್ಕಾನ ಮಲ್ಲಿಕಾರ್ಜುನ ದೇವಸ್ಥಾನ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸಿ ದೇವಸ್ಥಾನಗಳ ಅಭಿವೃದ್ಧಿಗೆ ಸಹಕರಿಸುವಂತೆ ಮನವಿಯಲ್ಲಿ ಕೋರಲಾಯಿತು.