ಬೈಂದೂರು: ವಾರಕ್ಕೊಮ್ಮೆ ಸಂಚರಿಸುವ 10215/10216 ಸಂಖ್ಯೆ ರೈಲನ್ನು ಮೂಕಾಂಬಿಕಾ ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡಿ ದಿನಂಪ್ರತಿ ಸಂಚರಿಸುವಂತೆ ಮಾಡಬೇಕೆಂದು ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾವೇಂದ್ರ ಅವರು ಕೇಂದ್ರ ರಾಜ್ಯ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾಗಿ ಮನವಿ ಮಾಡಿದರು.
ಬೈಂದೂರು ವಿಧಾನಸಭಾ ಕ್ಷೇತ್ರದ ಮೂಕಾಂಬಿಕಾ ರೋಡ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮೂಲ ಸೌಲಭ್ಯ ಕಲ್ಪಿಸುವುದು, ಬಿಜೂರು ರೈಲು ನಿಲ್ದಾಣ ಹಾಗೂ ಸೇನಾಪುರ ರೈಲ್ವೆ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ ಮೆಮು, ಮತ್ಸೃಗಂಧ ಹಾಗೂ ಪಂಚಗಂಗಾ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೂ ಕ್ರಮ ವಹಿಸುವಂತೆ ಮನವಿ ವಾಡಿದರು. ಸಂಸದರ ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವರು ಶ್ರೀವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ರೈಲ್ವೆ ಸಲಹಾ ಮಂಡಳಿಯ ವಾಜಿ ಸದಸ್ಯ ಕುಂಜಾಲು ವೆಂಕಟೇಶ್ ಕಿಣಿ ಬೈಂದೂರು ಇದ್ದರು.