ಗಂಗನದೊಡ್ಡಿ ಗ್ರಾಮದಲ್ಲಿ ಕೆರೆ ಒತ್ತುವರಿ ತೆರವುಗೊಳಿಸುವಂತೆ ಹನೂರಿನಲ್ಲಿ ರೈತ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ಗುರುಪ್ರಸಾದ್ ಅವರಿಗೆ ಮನವಿ ಸಲ್ಲಿಸಿದರು. ಅಮ್ಜಾದ್‌ಖಾನ್, ಅರ್ಪುದರಾಜ್, ಪಳನಿಸ್ವಾಮಿ, ಸೋಮಣ್ಣ ಇದ್ದರು. 
ಜಿಲ್ಲೆ

ಕೆರೆ ಒತ್ತುವರಿ ತೆರವಿಗೆ ತಹಸೀಲ್ದಾರ್‌ಗೆ ಮನವಿ

ನಾಗೇಶ ಎಸ್

ಹನೂರು: ತಾಲೂಕಿನ ಗಂಗನದೊಡ್ಡಿ ಗ್ರಾಮದಲ್ಲಿ ಕೆರೆ ಒತ್ತುವರಿ ತೆರವುಗೊಳಿಸುವಂತೆ ಬುಧವಾರ ತಾಲೂಕು ರೈತ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ವೈ.ಕೆ ಗುರುಪ್ರಸಾದ್ ಅವರಿಗೆ ಮನವಿ ಸಲ್ಲಿಸಿದರು.

ಸಂಘದ ಅಧ್ಯಕ್ಷ ಅಮ್ಜಾದ್‌ಖಾನ್ ಮಾತನಾಡಿ, ಗ್ರಾಮದ ಸರ್ವೇ ನಂಬರ್ 140ರಲ್ಲಿ ಕೆರೆಗೆ ತೆರಳುವ ಸಾರ್ವಜನಿಕರ ದಾರಿಯನ್ನು ಗ್ರಾಮದ ನಿವಾಸಿಯೊಬ್ಬರು ಮುಚ್ಚಿದ್ದಾರೆ. ಜತೆಗೆ ಕೆರೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದ ಗ್ರಾಮಸ್ಥರಿಗೆ ತುಂಬ ತೊಂದರೆಯಾಗಿದೆ. ಆದ್ದರಿಂದ ಸ್ಥಳಕ್ಕೆ ಭೇಟಿ ನೀಡಿ ಕೆರೆ ಒತ್ತುವರಿ ತೆರವುಗೊಳಿಸುವುದರ ಮೂಲಕ ಅನುಕೂಲ ಕಲ್ಪಿಸುವಂತೆ ಮನವಿ ಮಾಡಿದರು.

ಇದಕ್ಕೆ ತಹಸೀಲ್ದಾರ್ ವೈ.ಕೆ ಗುರುಪ್ರಸಾದ್ ಪ್ರತಿಕ್ರಿಯಿಸಿ, ಸ್ಥಳಕ್ಕೆ ಅಧಿಕಾರಿಗಳನ್ನು ಕಳುಹಿಸಿ ಪರಿಶೀಲಿಸಲಾಗುವುದು. ಒತ್ತುವರಿಯಾಗಿದ್ದಲ್ಲಿ ಅಗತ್ಯ ಕ್ರಮವಹಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರೈತ ಸಂಘದ ಪದಾಧಿಕಾರಿಗಳಾದ ಪಳನಿಸ್ವಾಮಿ, ಅರ್ಪುದರಾಜ್, ಸೋಮಣ್ಣ ಇನ್ನಿತರರು ಇದ್ದರು.