ಜಿಲ್ಲೆ

ಹೋರಾಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳೋಣ: ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ಮನವಿ ಮಾಡಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ

ಕೆ.ಎನ್.ರಾಘವೇಂದ್ರ

ಮಂಡ್ಯ: ಹಸಿದು ಬಂದವರಿಗೆ ಅನ್ನ, ನೀರು ನೀಡಿ ಸಾಕಿ ಸಲುಹುವ ಕರುನಾರಿನಲ್ಲಿ ಅನ್ನದಾತರು ಆತ್ಮಹತ್ಯೆಗೆ ಶರಣಾಗುತ್ತಾರೆ ಎಂದರೆ ನಾಚಿಕೆಯಿಂದ ತಲೆ ತಗ್ಗಿಸಬೇಕಾದ ವಿಷಯ ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಹಾವೇರಿ ಜಿಲ್ಲೆ ಒಂದರಲ್ಲಿಯೇ 18 ಜನ ಅನ್ನದಾತರು ಸಾವಿಗೆ ಶರಣಾಗಿರುವುದು. ಇನ್ನಿತರೆ ಜಿಲ್ಲೆಗಳಲ್ಲಿ ಅದೇ ಸರಣಿ ಶುರುವಾಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ದಯಮಾಡಿ ಯಾರೂ ಆತುರದ ನಿರ್ಧಾರ ಕೈಗೊಳ್ಳುವುದು ಬೇಡ. ಒಂದು ಜೀವಹಾನಿ ಆ ಕುಟುಂಬವನ್ನು ಬೀದಿಗೆ ತಂದು ನಿಲ್ಲಿಸುತ್ತದೆ. ಹೋರಾಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳೋಣ. ನಿಮ್ಮ ಜತೆ ರಾಜ್ಯ ರೈತ ಸಂಘ ಹಾಗೂ ನಾನು ಇದ್ದೇನೆ. ದಯವಿಟ್ಟು ಯಾರೂ ಜೀವಕ್ಕೆ ಕುತ್ತು ತಂದುಕೊಳ್ಳುವುದು ಬೇಡ. ಸರ್ಕಾರ ತಕ್ಷಣ ಇತ್ತ ಗಮನ ಹರಿಸಬೇಕು. ರೈತರಿಗೆ ವಿಶೇಷ ಪ್ಯಾಕೇಜ್ ಅನ್ನು ಘೋಷಣೆ ಮಾಡಿ ರೈತರ ಹಿತ ಕಾಯುವ ಕೆಲಸ ಮಾಡಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.