ಜಿಲ್ಲೆ

ಸಮ್ಮೇಳನಕ್ಕೆ ಆಗಮಿಸುವಂತೆ ಮನವಿ

ಆದರ್ಶ್. ಎಂ.ಕೆ.

ಮಡಿಕೇರಿ: ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ೨೦೨೪ ಡಿ.೨೦, ೨೧, ೨೨ ರಂದು ನಡೆಯಲಿದೆ. ಸಮ್ಮೇಳನಕ್ಕೆ ಸಾಹಿತ್ಯ ಪರಿಷತ್ ಸದಸ್ಯರು, ಅಧ್ಯಾಪಕರು, ಸರ್ಕಾರಿ ನೌಕರರು, ಕನ್ನಡ ಅಭಿಮಾನಿಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಮ್ಮೇಳನಕ್ಕೆ ಭೇಟಿ ನೀಡಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಮನವಿ ಮಾಡಿದ್ದಾರೆ.

ಸಮ್ಮೇಳನದಲ್ಲಿ ಕನ್ನಡ ನಾಡು ನುಡಿ, ಪ್ರಸ್ತುತ ಸಮಸ್ಯೆಗಳು ಕುರಿತು ಉಪನ್ಯಾಸಗಳು, ಕವಿಗೋಷ್ಠಿಗಳು, ಮತ್ತು ಪುಸ್ತಕ ಮೇಳವನ್ನು ಒಳಗೊಂಡಿರುತ್ತದೆ. ಕಾರ್ಯಕ್ರಮ ಕರ್ನಾಟಕ, ಇತರ ರಾಜ್ಯಗಳು ಮತ್ತು ವಿದೇಶಗಳಿಂದ ಬಹುಸಂಖ್ಯೆಯಲ್ಲಿ ಭಾಗವಹಿಸುವವರನ್ನು ಆಕರ್ಷಿಸುವ ನಿರೀಕ್ಷೆಯಿದೆ. ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಭಾಷೆ, ಸಾಹಿತ್ಯ, ಕಲಾ, ಸಂಸ್ಕೃತಿ ಮತ್ತು ಸಂಗೀತವನ್ನು ಉಳಿಸುವ ಮತ್ತು ಅಭಿವೃದ್ಧಿ ಮಾಡುವ ಉದ್ದೇಶದಿಂದ ಲೇಖಕರು, ಕವಿಗಳು ಮತ್ತು ಕನ್ನಡಿಗರ ಸಮ್ಮೇಳನವಾಗಿದೆ ಎಂದು ತಿಳಿಸಿದ್ದಾರೆ.

ಸಮ್ಮೇಳನಕ್ಕೆ ತೆರಳಲಿಚ್ಚಿಸುವವರು ಪ್ರತಿನಿಧಿಯಾಗಿ ನೋಂದಾಯಿಸಿಕೊಳ್ಳಬೇಕಾಗಿದೆ. ಸಮ್ಮೇಳನದ ಪ್ರತಿನಿಧಿ ಶುಲ್ಕ ರೂ ೬೦೦ ಆಗಿದ್ದು, ನೋಂದಣಿ ಮಾಡಿಕೊಳ್ಳಲು ೯೪೪೮೩೪೬೨೭೬ ಮತ್ತು ೯೯೦೦೬೦೯೭೫೩ ದೂ.ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.