ಜಿಲ್ಲೆ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ರದ್ದುಗೊಳಿಸಲು ಆಗ್ರಹ

ಆರ್.ಕೃಷ್ಣ

ಮೈಸೂರು: ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ನಮ್ಮ ಕರ್ನಾಟಕ ಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.

ಸಿದ್ಧಾರ್ಥನಗರದಲ್ಲಿರುವ ಮಹದೇಶ್ವರ ದೇವಸ್ಥಾನದ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬುಧವಾರ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು, ಆ್ಯಪ್ ನಿಷೇಧಕ್ಕೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ಇತ್ತೀಚೆಗೆ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳು ಹೆಚ್ಚಾಗುತ್ತಿವೆ. ಹಣದ ಆಮಿಷದಿಂದಾಗಿ ವಿದ್ಯಾರ್ಥಿಗಳು, ಯುವಕರು ದುಶ್ಚಟ, ದುರ್ನಡತೆಗೆ ಬಲಿಯಾಗಿ ಅನ್ಯ ದಾರಿಯಲ್ಲಿ ನಡೆಯುತ್ತಿದ್ದಾರೆ. ಬೇಗ ಹಣ ಮಾಡಬಹುದು ಎಂದು ಬೆಟ್ಟಿಂಗ್ ಆ್ಯಪ್‌ನಲ್ಲಿ ಹೂಡಿಕೆ ಮಾಡಿ ಹಣ ಕಳೆದುಕೊಳ್ಳುವುದಲ್ಲದೆ ಕೆಲವರು ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು, ಯುವಕರ ಭವಿಷ್ಯದ ದೃಷ್ಟಿಯಿಂದ ಆ್ಯಪ್‌ಗಳನ್ನು ಕೂಡಲೇ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ಸೇನೆಯ ಜಿಲ್ಲಾಧ್ಯಕ್ಷ ಮುರುಗನ್, ಮುಖಂಡರಾದ ಮಹೇಶ್, ಕುಮಾರ್, ಸತೀಶ್ ಇತರರಿದ್ದರು.