ವಿಜಯಪುರ ಜಿಲ್ಲಾಡಳಿತಕ್ಕೆ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದಿಂದ ಮನವಿ ಸಲ್ಲಿಸಲಾಯಿತು. ಜಿಲ್ಲಾಧ್ಯಕ್ಷ ಶಿವಾನಂದ ಹಿರೇಕುರಬರ, ಗಿರೀಶ ಬಿರಾದಾರ, ವಿಜಯಕುಮಾರ ವಪ್ಪಾರಿ ಮತ್ತಿತರರಿದ್ದಾರೆ.  
ಜಿಲ್ಲೆ

ಅನುದಾನಿತ ಶಾಲೆಗಳಿಗೂ ಉಚಿತ ವಿದ್ಯುತ್ ನೀಡಲು ಆಗ್ರಹ, ಜಿಲ್ಲಾಡಳಿತದ ಮೂಲಕ ಸಿಎಂ ಸಿದ್ದರಾಮಯ್ಯಗೆ ಮನವಿ

ವಿಜಯಪುರ: ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ನೀರು ಸರಬರಾಜು ಮಾಡಿದ ಮಾದರಿಯಲ್ಲಿಯೇ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೂ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದಿಂದ ಬುಧವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಸಂಘದ ಜಿಲ್ಲಾಧ್ಯಕ್ಷ ಶಿವಾನಂದ ಹಿರೇಕುರಬರ ಮಾತನಾಡಿ, ಕರ್ನಾಟಕ ಸರ್ಕಾರದ ಗ್ಯಾರಂಟಿ ಕಾರ್ಯಕ್ರಮಗಳು ಯಶಸ್ವಿಯಾಗಿ ಮುನ್ನಡೆಯುತ್ತಿವೆ. ಇದೀಗ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ನೀರು ಸರಬರಾಜು ಮಾಡುವ ಆದೇಶ ಮಾಡಿದ್ದು ಸ್ವಾಗತಾರ್ಹ. ಆದರೆ ಈ ಆದೇಶವು ರಾಜ್ಯದಲ್ಲಿರುವ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ವಿಸ್ತರಣೆ ಮಾಡಬೇಕೆಂದು ಆಗ್ರಹಿಸಿದರು.

ಪ್ರಧಾನ ಕಾರ್ಯದರ್ಶಿ ಗಿರೀಶ ಬಿರಾದಾರ, ವಿಜಯಕುಮಾರ ವಪ್ಪಾರಿ, ಗಿರೀಶ ಕುಲಕರ್ಣಿ, ಸುರೇಶ ಬಿರಾದಾರ, ಆನಂದ ಕುಲಕರ್ಣಿ, ಮಹಾಂತೇಶ ಜತ್ತಿ, ಎಸ್.ಎಸ್. ಗಣಿ, ಕಾಶಿನಾಥ ಉಮದಿ, ಬಿ.ವೈ. ನರಹಟ್ಟಿ, ಎಸ್.ಪಿ. ಇಂಡಿ, ಎಸ್.ಎಸ್. ಪಾಟೀಲ ಮತ್ತಿತರರಿದ್ದರು.