ಹಿರೇಕೆರೂರ: ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಮರಡೆಪ್ಪ ಹೊಳಜೋಗಿ ನೇತೃತ್ವದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.
ಈ ಕುರಿತು ಮಾತನಾಡಿದ ಅವರು, ಎನ್‌ಪಿಎಸ್ ರದ್ದುಪಡಿಸಿ ಒಪಿಎಸ್ ಜಾರಿಗೊಳಿಸಬೇಕು. ಸಿ ಮತ್ತು ಆರ್ ತಿದ್ದುಪಡಿ ಮಾಡಿಸಿ ಶಿಕ್ಷಕರಿಗೆ ನ್ಯಾಯ ಒದಗಿಸಬೇಕು. ಮುಖ್ಯಶಿಕ್ಷಕರ ವೇತನ ತಾರತಮ್ಯ ಸರಿಪಡಿಸಬೇಕು. ಮಧ್ಯಾಹ್ನದ ಬಿಸಿಯೂಟದ ಮೊಟ್ಟೆ ದರ ಪರಿಷ್ಕರಿಸಬೇಕು. ದೈಹಿಕ ಶಿಕ್ಷಕರನ್ನು ಮುಖ್ಯಶಿಕ್ಷಕರ ಹುದ್ದೆಗೆ ಬಡ್ತಿ ನೀಡಲು ಅವಕಾಶ ಕಲ್ಪಿಸಬೇಕು ಹಾಗೂ ವೈದ್ಯಕೀಯ ಬಿಲ್‌ಗಳಿಗೆ ಅನುದಾನ ಮಂಜೂರು ಮಾಡಿಸುವಂತೆ ಒತ್ತಾಯಿಸಿದರು.
ಜಿಲ್ಲಾಧ್ಯಕ್ಷ ಮಲ್ಲೇಶ ಕರಿಗಾರ, ಮಲ್ಲಿಕಾರ್ಜುನ ಸಿ.ಎಸ್., ಮಾರುತಿ ಜಿ.ಎನ್., ಶಾಂತಾ ಬತ್ತೇರ, ನಂಜುಂಡೆಪ್ಪ ಕೆ.ಸಿ., ಮಂಜನಗೌಡ ಕರೇಗೌಡ್ರ ಹಾಗೂ ಪದಾಧಿಕಾರಿಗಳು ಇದ್ದರು.