ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಬೆಳ್ತಂಗಡಿ ತಹಸೀಲ್ದಾರ್ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸೋಮವಾರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮೊಬೈಲ್ ಆ್ಯಪ್ ಮೂಲಕ ಕೆಲಸ ಮಾಡಲು ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸದ ಕಾರಣ ಹಲವು ಸಮಸ್ಯೆಗಳಾಗುತ್ತಿರುವ ಬಗ್ಗೆ ಕಚೇರಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಬಗ್ಗೆ, ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯ ಕಲ್ಪಿಸುವ ಬಗ್ಗೆ ಬೇಡಿಕೆಗಳನ್ನು ಸರ್ಕಾರದ ಮುಂದೆ ಸಮಿತಿ ಇಟ್ಟಿದ್ದು, ಈ ಬೇಡಿಕೆಗಳನ್ನು ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳು ಹಲವಾರು ಸಮಸ್ಯೆ ಎದುರಿಸುತ್ತಿದ್ದು ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಘದ ರಾಜ್ಯ ಸಮಿತಿ ಸಭೆಯಲ್ಲಿ ಸರ್ಕಾರದ ಮುಂದೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ನಿರ್ಧರಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.