ಕುದೂರು: ಹೋಬಳಿಯ ಹುಲಿಕಲ್ ಗ್ರಾಮದಲ್ಲಿ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ 10 ಕರುಗಳನ್ನು ಕುದೂರು ಪೊಲೀಸರು ಸೋಮವಾರ ರಸಿದ್ದಾರೆ.
ಕಸಾಯಿಖಾನೆಗೆ ಸಾಗಿಸಲು ಎಮ್ಮೆ ಹಾಗೂ ಹಸುವಿನ ಕರುಗಳನ್ನು ಗಾಡಿಯಲ್ಲಿ ಸಾಗಿಸುತ್ತಿರುವುದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಮೇರೆಗೆ ದಾಳಿ ಮಾಡಿದ ಪೊಲೀಸರು ಕರುಗಳನ್ನು ವಶಕ್ಕೆ ಪಡೆದಿದ್ದಾರೆ. ವಾಹನ ಚಾಲಕ ಪರಾರಿಯಾಗಿದ್ದಾನೆ. ಕುದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.