ಕಾರ್ಕಳ: ಅತ್ಯಂತ ಹಳೆಯ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳುವಿಗೆ ಅತ್ಯಂತ ಪ್ರಾಚೀನ ಮಹತ್ವವಿದೆ. ಪ್ರಪಂಚಾದ್ಯಂತ ವಿವಿಧ ವಿಶ್ವವಿದ್ಯಾಲಯಗಳು ತುಳು ಭಾಷೆ ಬಗ್ಗೆ ಸಂಶೋಧನೆ ನಡೆಸುತ್ತಿವೆ. ಇದು ಭಾಷೆಯ ಬಲವಾದ ಅಡಿಪಾಯ ಮತ್ತು ಶ್ರೀಮಂತ ಸಾಂಸ್ಕೃತಿಕ ಪರಂಪರೆ ಗುರುತಿಸುತ್ತಿವೆ ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದ್ಕ್ ವಸ್ತು ಸಂಗ್ರಹಾಲಯದ ಸ್ಥಾಪಕ ಡಾ.ತುಕಾರಾಮ್ ಪೂಜಾರಿ ಹೇಳಿದರು.
ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ತುಡರ್ ಕ್ಲಬ್ ವತಿಯಿಂದ ಇತ್ತೀಚೆಗೆ ತುಡರ್ ಸಿರಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಉಪಪ್ರಾಂಶುಪಾಲ ಮತ್ತು ಡೀನ್ (ಅಕಾಡೆಮಿಕ್ಸ್) ಡಾ.ಐ.ರಮೇಶ್ ಮಿತ್ತಂತಾಯ ಅಧ್ಯಕ್ಷತೆ ವಹಿಸಿದ್ದರು. ಬೊಲ್ಪು ನಿಯತಕಾಲಿಕ, ಸಂಪುಟ 2ರ ಬಿಡುಗಡೆ ನಡೆಯಿತು. ನಿಟ್ಟೆ ಆಫ್ ಕ್ಯಾಂಪಸ್ ಸೆಂಟರ್‌ನ ಮೈಟೆನೆನ್ಸ್ ಮತ್ತು ಅಭಿವೃದ್ಧಿ ವಿಭಾಗ ನಿರ್ದೇಶಕ ಪ್ರೊ.ಯೋಗೀಶ್ ಹೆಗ್ಡೆ, ಡಾ.ಆಶಾಲತಾ ಸುವರ್ಣ, ನಿಟ್ಟೆ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ಡೀನ್ ಡಾ.ನರಸಿಂಹ ಬೈಲ್ಕೇರಿ ಉಪಸ್ಥಿತರಿದ್ದರು.