ಜಿಲ್ಲೆ

ವಸತಿ ಶಾಲೆಯಲ್ಲಿ ವಾರ್ಡನ್ ಲೈಂಗಿಕ ಕಿರುಕುಳ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಸಾಂತ್ವಾನ ಕೇಂದ್ರದವರು ಕಣ್ತೆರೆಯಲಿಲ್ಲ!

ಕುಮಟಾ: ಅಂಬೇಡ್ಕರ್ ವಸತಿ ಶಾಲೆಯ ಮಹಿಳಾ ಸಿಬ್ಬಂದಿಗೆ ವಾರ್ಡನ್​ಯೂಬ್ಬರು ಲೈಂಗಿಕ ಕಿರುಕುಳ ನೀಡಿದ ಘಟನೆ ಪಟ್ಟಣದಲ್ಲಿ ನಡೆದಿದೆ.

ವಾರ್ಡನ್ ಶಂಕರ ಎಸ್. ಪೋಳ್(30) ಲೈಂಗಿಕ ಕಿರುಕುಳ ನೀಡಿದ ಆರೋಪಿ.

ಕಳೆದ 7 ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ ಮಹಿಳೆ ಕೆಲಸ ಮಾಡುತ್ತಿದ್ದಾಳೆ. ವಾರ್ಡನ್ ಶಂಕರ ಪೋಳ್ ಅಸಭ್ಯವಾಗಿ ವರ್ತಿಸುತ್ತಿದ್ದು, ಈ ಬಗ್ಗೆ ಕೆಲ ದಿನಗಳ ಹಿಂದೆಯೇ ಪ್ರಾಚಾರ್ಯರು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಹಾಗೂ ಮಹಿಳಾ ಸಾಂತ್ವಾನ ಕೇಂದ್ರಕ್ಕೂ ದೂರು ನೀಡಿದ್ದರು. ಆದರೆ, ಏನೂ ಪ್ರಯೋಜನವಾಗಿರಲಿಲ್ಲ.

ಸೆ. 12 ರಂದು ವಾರ್ಡನ್ ಶಾಲೆಯ ಮಹಡಿ ಮೆಟ್ಟಿಲು ಬಳಿ ಲೈಂಗಿಕ ಕಿರುಕುಳ ನೀಡಿದ್ದು, ಸಹಕರಿಸದಿದ್ದರೆ ಕೆಲಸದಿಂದ ತೆಗೆಸುತ್ತೇನೆ. ಈ ವಿಷಯ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.