ಮದ್ದೂರು ಪಟ್ಟಣದ ಕೆಎಸ್ಸಾರ್ಟಿಸಿ ಡಿಪೋ ಸಮೀಪ ಇರುವ ಬಡಾವಣೆಗೆ ಮೂಲ ಸೌಕರ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಇಲ್ಲಿಯ ನಿವಾಸಿಗಳು ಪ್ರತಿಭಟನೆ ಮಾಡಿದರು. ಪಿ.ಶಶಿಕುಮಾರ್, ವೀರಭದ್ರಚಾರ್, ಎಂ.ಪಿ. ನಾಗರಾಜು, ಮಂಜು, ನರಸಿಂಹಮೂರ್ತಿ, ಚೆಲುವರಾಜು, ಶ್ರೀರಂಗ, ಭಾರತಿ, ಕಾವ್ಯ ಸೇರಿದಂತೆ ಇತರರಿದ್ದರು. 
ಜಿಲ್ಲೆ

ಮೂಲಸೌಕರ್ಯಕ್ಕೆ ಆಗ್ರಹಿಸಿ ನಿವಾಸಿಗಳ ಪ್ರತಿಭಟನೆ

ಲೋಕೇಶ್ ಮನು. ಡಿ

ಮದ್ದೂರು: ಪಟ್ಟಣದ ಕೆಎಸ್ಸಾರ್ಟಿಸಿ ಬಸ್ ಡಿಪೋ ಸಮೀಪ ಇರುವ ಬಡಾವಣೆಗೆ ಮೂಲಸೌಕರ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಇಲ್ಲಿಯ ನಿವಾಸಿಗಳು ಪ್ರತಿಭಟನೆ ನಡೆಸಿದರು. ಬಡಾವಣೆಗೆ ಮೂಲಸೌಕರ್ಯ ಕಲ್ಪಿಸಿದ ಪುರಸಭಾ ಅಧಿಕಾರಿಗಳ ವಿರುದ್ಧ ಶನಿವಾರ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮದ ನಿವಾಸಿ ಎಂ.ಆರ್.ವೀರಭದ್ರಾಚಾರ್ ಮಾತನಾಡಿ, ಬಡಾವಣೆಯಲ್ಲಿ ಸುಮಾರು 15 ವರ್ಷಗಳಿಂದ ವಾಸ ಮಾಡುತ್ತಿದ್ದು, ರಸ್ತೆ, ಚರಂಡಿ, ಸ್ವಚ್ಛತೆ ಸೇರಿದಂತೆ ಯಾವುದೇ ರೀತಿಯ ಮೂಲಸೌಕರ್ಯಗಳು ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಈ ಬಗ್ಗೆ ಹಲವಾರು ಬಾರಿ ಪುರಸಭಾ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ಚರಂಡಿ ವ್ಯವಸ್ಥೆ ಸರಿಯಿಲ್ಲದ ಪರಿಣಾಮ ಕಲುಷಿತ ನೀರನ್ನೇ ತುಳಿದುಕೊಂಡು ಮನೆಗಳಿಗೆ ಹೋಗಬೇಕು. ಗಿಡಗಂಟಿಗಳು ಬೆಳೆದುಕೊಂಡಿರುವುದರಿಂದ ಹಾವು, ಚೇಳುಗಳ ಆವಾಸ ಸ್ಥಾನವಾಗಿದೆ. ಕೂಡಲೇ ಪುರಸಭಾ ಅಧಿಕಾರಿಗಳು

ಇತ್ತ ಗಮನಹರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡುವ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಬಡಾವಣೆ ನಿವಾಸಿಗಳಾದ ಎಂ.ಪಿ. ನಾಗರಾಜು, ಮಂಜು, ನರಸಿಂಹಮೂರ್ತಿ, ಚೆಲುವರಾಜು, ಶ್ರೀರಂಗ, ಭಾರತಿ, ಕಾವ್ಯ ಸೇರಿದಂತೆ ಇತರರಿದ್ದರು.