ಜಿಲ್ಲೆ

ತಂದೆ, ತಾಯಿ, ಗುರುಗಳಿಗೆ ಗೌರವ ಕೊಡಿ

ಮರಿದೇವ ಹೂಗಾರ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಹೆಗ್ಗೇರಿಯ ಆಯುರ್ವೇದ ಮಹಾವಿದ್ಯಾಲಯದಲ್ಲಿ ಸೋಮವಾರ ವಾರ್ಷಿಕ ಸ್ನೇಹ ಸಮ್ಮೇಳನ ಜರುಗಿತು.
ಕಿಮ್ಸ್ ಮಾಜಿ ನಿರ್ದೇಶಕ ಡಾ.ಕೆ.ಎಫ್. ಕಮ್ಮಾರ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ತಂದೆ, ತಾಯಿ, ಮತ್ತು ಗುರುಗಳನ್ನು ಗೌರವಿಸಬೇಕು. ಸಾಮಾಜಿಕ ಜಾಲತಾಣಗಳಿಂದ ಜೀವನ ಹಾಳು ಮಾಡಿಕೊಳ್ಳಬಾರದು. ವೈದ್ಯಕೀಯ ಕ್ಷೇತ್ರದಲ್ಲಿ ಸಂಶೋಧನೆ ನಡೆಸಬೇಕು ಎಂದು ಸಲಹೆ ನೀಡಿದರು.
ಹುಬ್ಬಳ್ಳಿ ಆಯುರ್ವೇದ ಸೇವಾ ಸಮಿತಿ ಅಧ್ಯಕ್ಷ ಗೋವಿಂದ ಜೋಶಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಇದರಿಂದ ಮನೋದೈಹಿಕ ಆರೋಗ್ಯ ವೃದ್ಧಿಯಾಗಲಿದೆ ಎಂದರು.
ಪ್ರಾಚಾರ್ಯ ಡಾ.ಎ.ಎಸ್. ಪ್ರಶಾಂತ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಸಮಿತಿ ಉಪಾಧ್ಯಕ ಮೋಹನ ದೇಸಾಯಿ, ಕಾರ್ಯದರ್ಶಿ ಸಂಜೀವ ಜೋಶಿ, ಖಜಾಂಚಿ ಎಸ್.ಆರ್. ಮಾಮಲೇದೇಶಪಾಂಡೆ, ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸಿನೆಟ್ ಸದಸ್ಯ ಡಾ.ಜೆ.ಆರ್. ಜೋಶಿ, ವಿದ್ಯಾರ್ಥಿ ಸಂಘದ ಚೇರ್ಮನ್ ಡಾ. ಪೂರ್ಣಿಮಾ ಬಿ., ಪದಾಧಿಕಾರಿಗಳಾದ ಡಾ. ವರ್ಷ ಮಳಗಿ, ಡಾ. ವಿನಯಕುಮಾರ ಹಿರೇಮಠ ಇತರರು ಇದ್ದರು.