ಮೂಲ್ಕಿ: ಸಾಂಸ್ಕೃತಿಕ ಹಾಗೂ ಧಾರ್ಮಿಕ ಕ್ಷೇತ್ರದ ಸಾಧಕರನ್ನು ಸಮಾಜಕ್ಕೆ ಪರಿಚಯಿಸಿ ಅವರ ಸೇವೆಗೆ ಗೌರವ ನೀಡುವ ಜೊತೆಗೆ ಯುವ ಸಮಾಜಕ್ಕೆ ವಾರ್ಗದರ್ಶಿಯಾಗುವ ಪಯತ್ನ ಅಭಿನಂದನೀಯ ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಹೇಳಿದರು.
ಮೂಲ್ಕಿಯಲ್ಲಿ ನಡೆದ ಹೊಸ ಅಂಗಣದ ತಿಂಗಳ ಬೆಳಕು ಕಾರ್ಯಕ್ರಮದಡಿ ನಡೆದ ಸಾಧಕರಿಗೆ ಗೌರವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದೈವ ನರ್ತಕ ಕಿಟ್ಟ ಪಂಬದ ಅವರನ್ನು ಗೌರವಿಸಲಾಯಿತು. ಮೂಲ್ಕಿ ಸೀಮೆಯ ಬಂಕಿನಾಯಕರು, ಬ್ಯಾಂಕ್ ಆಫ್ ಬರೋಡ ಮೂಲ್ಕಿ ಶಾಖಾಧಿಕಾರಿ ಸಚಿನ್ ಹೆಗ್ಡೆ, ಬಪ್ಪನಾಡು ಲಯನ್ಸ್ ಕ್ಲಬ್ ಇನ್‌ಸ್ಪೈಯರ್ ಸ್ಥಾಪಕಾಧ್ಯಕ್ಷ ವೆಂಕಟೇಶ ಹೆಬ್ಬಾರ್, ಪ್ರತಿಭಾ ಹೆಬ್ಬಾರ್, ಮೂಲ್ಕಿ ಬಂಟರ ಸಂಘ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ನಗರ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಜಿ.ಎಂ.ಹರ್ಷರಾಜ ಶೆಟ್ಟಿ, ಅತಿಕಾರಿಬೆಟ್ಟು ಗ್ರಾ.ಪಂ. ಉಪಾಧ್ಯಕ್ಷ ಮನೋಹರ ಕೋಟ್ಯಾನ್, ಜೆಸಿಐ ಟ್ರಸ್ಟ್ ಅಧ್ಯಕ್ಷ ಹಬಿಬುಲ್ಲ, ಉದ್ಯಮಿ ಜೋನ್ ಕ್ವಾಡ್ರಾಸ್, ಸಂಟಕ ಡಾ.ಹರಿಶ್ಚಂದ್ರ ಪಿ.ಸಾಲ್ಯಾನ್, ವಾಸು ಪೂಜಾರಿ ಚಿತ್ರಾಪು, ಮೂಲ್ಕಿ ಬಿಲ್ಲವ ಸಂಘ ಅಧ್ಯಕ್ಷ ವಾಮನ ಕೋಟ್ಯಾನ್ ನಡಿಕುದ್ರು, ಮಾಜಿ ಅಧ್ಯಕ್ಷ ರಮೇಶ್ ಅಮೀನ್ ಕೊಕ್ಕರಕಲ್, ವಕೀಲ ರವೀಶ್ ಕಾಮತ್, ಶೇಖರ್ ಕೊಳಚಿಕಂಬಳ, ಕೃಷ್ಣಯ್ಯ ಆಚಾರ್ಯ ಪುನರೂರು, ನಂದಾ ಪಾಯಸ್, ದಿನೇಶ್ ಶೆಟ್ಟಿ ಉಪಸ್ಥಿತರಿದ್ದರು.
ಹರಿಶ್ಚಂದ್ರ ಸಾಲ್ಯಾನ್ ಸ್ವಾಗತಿಸಿದರು. ವಕೀಲ ರವೀಶ್ ಕಾಮತ್ ವಂದಿಸಿದರು. ಅಶೋಕ್ ಶೆಟ್ಟಿ ನಿರೂಪಿಸಿದರು.