ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ವಿನಾಯಕ ಗೆಳೆಯರ ಬಳಗದ ವತಿಯಿಂದ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.
ಬಳಗದ ಸದಸ್ಯ ನಾಗೇಂದ್ರ ಮಾತನಾಡಿ, ಮಹದೇಶ್ವರ ಬೆಟ್ಟ ಪ್ರಸಿದ್ಧ ಧಾರ್ಮಿಕ ಯಾತ್ರಸ್ಥಳ. ಇಲ್ಲಿಗೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಈ ದಿಸೆಯಲ್ಲಿ ಪೌರ ಕಾರ್ಮಿಕರು ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಹಾಗಾಗಿ ಈ ಪವಿತ್ರ ಪುಣ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಸೇವೆ ಶ್ಲಾಘನೀಯ. ಆದ್ದರಿಂದ ಇವರ ಸೇವೆಯನ್ನು ಮನಗಂಡು ಸನ್ಮಾನಿಸಲಾಗುತ್ತಿದೆ ಎಂದು ತಿಳಿಸಿದರು.
ಬಳಗದ ಸದಸ್ಯರಾದ ರಾಮು, ಸೆಂದಿಲ್, ಗುರುಪಾದ, ಕುಮಾರ್, ಸುನೀಲ್, ಮಾದೇವ, ಚಿಕ್ಕಮಾದ, ಸ್ವಾಮಿ, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಗೋಪಾಲ್, ಪ್ರಧಾನ ಕಾರ್ಯದರ್ಶಿ ರಾಜ ಇತರರು ಇದ್ದರು.