ಸಿಂಧನೂರು: ಜಗತ್ತಿನ ದೊಡ್ಡ ಲಿಖಿತ ಸಂವಿಧಾನ ಹೊಂದಿರುವ ನಮ್ಮ ದೇಶದಲ್ಲಿ ಸಂವಿಧಾನದ ಆಶಯಗಳು ಸಂಪೂರ್ಣವಾಗಿ ಈಡೇರಿದರೆ ದೇಶ ಸುಭದ್ರವಾಗಲಿದೆ ಎಂದು ತಾಪಂ ಇಒ ಚಂದ್ರಶೇಖರ ಹೇಳಿದರು.
ತಾಲೂಕಿನ ಗಾಂಧಿನಗರ ಗ್ರಾಪಂ ವ್ಯಾಪ್ತಿಯ ವೆಂಕಟೇಶ್ವರಕ್ಯಾಂಪ್‌ನಲ್ಲಿ ನಿರ್ಮಾಣವಾದ ಅಮೃತ ಸರೋವರದ ಕೆರೆಯ ದಂಡೆಯ ಮೇಲೆ ಆಯೋಜಿಸಿದ್ದ ಸಂವಿಧಾನ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದರು. ನಮ್ಮ ಸಂವಿಧಾನ ನಮಗೆ ಎಲ್ಲವನ್ನೂ ನೀಡಿದೆ. ಹೀಗಾಗಿ ನಾವುಗಳು ಸಂವಿಧಾನಕ್ಕೆ ಋಣಿಯಾಗಿರಬೇಕಾಗುತ್ತದೆ ಎಂದರು.