ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇತಿಹಾಸ ನಿರ್ಮಿಸುತ್ತಿದ್ದೇವೆ. ಸ್ವಾಮಿ ವಿವೇಕಾನಂದ ಜಯಂತಿಯಂದು ಯುವನಿಧಿ ಯೋಜನೆಗೆ ಚಾಲನೆ ದೊರೆತಿರುವುದು ಸಂತೋಷದ ವಿಷಯ. ನನ್ನನ್ನು ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷನನ್ನಾಗಿ ಮಾಡಿದ್ದರು. ಹೀಗಾಗಿ ಗ್ಯಾರಂಟಿ ಯೋಜನೆಗಳು ಸಂಪೂರ್ಣವಾಗಿ ಅನುಷ್ಠಾನಗೊಂಡಿರುವುದು ನನಗೂ ಸಮಾಧಾನ ತಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮನವಿ ಮಾಡಿದರು.
ಯುವನಿಧಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಕ್ತಿ ಯೋಜನೆಗಳ ಮೂಲಕ ಲಕ್ಷಾಂತರ ಮಂದಿ ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿರುವುದು ದೇಶದಲ್ಲೇ ಮೊದಲು. ಸಿಎಂ ಹಾಗೂ ಡಿಸಿಎಂ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸಬೇಕೆಂದು
ಡಾ.ಶರಣಪ್ರಕಾಶ ಪಾಟೀಲ್ ಮಾತನಾಡಿ, ಯುವಕರ ಭವಿಷ್ಯ ನಿರ್ಮಿಸುವ ಕಾರ್ಯಕ್ರಮ ಯುವನಿಧಿ. 2023ರಲ್ಲಿ ಸುಮಾರು ಐದು ಲಕ್ಷ ಪದವೀಧರರು ಕಾಲೇಜುಗಳಿಂದ ಹೊರಬಂದಿದ್ದಾರೆ. ಇದುವರೆಗೆ 70 ಸಾವಿರ ವಿದ್ಯಾರ್ಥಿಗಳು ಯುವನಿಧಿಗೆ ನೋಂದಣಿ ಮಾಡಿಕೊಂಡಿದ್ದಾರೆ. ಸರ್ಕಾರದ ಗುರಿ ಕೇವಲ ಯುವಕರಿಗೆ ಯುವನಿಧಿ ಕೊಡುವುದಲ್ಲ, ಕೌಶಲಗಳನ್ನು ಕಲಿಸಿ, ಉದ್ಯೋಗ ಕೊಡುವ ಚಿಂತನೆ ಇದೆ. ರಾಜ್ಯ, ದೇಶದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ನಮ್ಮ ಯುವಕರಿಗೆ ಉದ್ಯೋಗ ಸಿಗಬೇಕೆಂಬುದು ನಮ್ಮ ಆಶಯವಾಗಿದೆ ಎಂದರು.
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಮಾತನಾಡಿ, ಇರುವಕ್ಕಿ ಕೃಷಿ ಹಾಗೂ ತೋಟಗಾರಿಕೆ ವಿವಿಗೆ ಮೂಲ ಸೌಕರ್ಯ ಒದಗಿಸಲು ಅನುದಾನದ ಅಗತ್ಯವಿದೆ. ಈಗಾಗಲೇ ಶಿವಮೊಗ್ಗದ ಸೋಗಾನೆಯಲ್ಲಿ ಆಯುರ್ವೇದ ವಿವಿ ಸ್ಥಾಪನೆಗೆ ಹಿಂದಿನ ಸರ್ಕಾರ ಅನುಮೋದನೆ ನೀಡಿತ್ತು. ಈ ಬಾರಿಯ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಕನಿಷ್ಠ 40 ಕೋಟಿ ರೂ. ಅನುದಾನ ಒದಗಿಸಿದರೆ ವಿವಿ ನಿರ್ಮಾಣ ಆರಂಭಿಸಬಹುದು. ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ರಾತ್ರಿ ವೇಳೆ ವಿಮಾನ ಲ್ಯಾಂಡಿಂಗ್‌ಗೆ ಕೆಲವು ತಾಂತ್ರಿಕ ಉಪಕರಣಗಳ ಅಗತ್ಯವಿದೆ ಎಂದು ಸಿಎಂ ಗಮನಸೆಳೆದರು.