ಹೆಬ್ರಿ: ಪೆರ್ಡೂರು ಗ್ರಾಪಂ ವತಿಯಿಂದ ಮಹಿಳಾ ಮತ್ತು ಮಕ್ಕಳ ವಿಶೇಷ ಹಕ್ಕುಗಳ ಗ್ರಾಮಸಭೆ ಪೆರ್ಡೂರು ಪ್ರೌಢಶಾಲೆಯಲ್ಲಿ ಗ್ರಾಪಂ ಅಧ್ಯಕ್ಷೆ ಚೇತನಾ ಶೆಟ್ಟಿ ಅಧ್ಯಕ್ಷತೆಯಲ್ಲಿ ಜರುಗಿತು.
ಅಧ್ಯಕ್ಷೆ ಚೇತನಾ ಶೆಟ್ಟಿ ಮಾತನಾಡಿ, ಮಕ್ಕಳು ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಸ್ಥಳೀಯ ಹಾಸ್ಟೆಲ್ ವಿದ್ಯಾರ್ಥಿಗಳ ಬೇಡಿಕೆಯಂತೆ ಕುಡಿಯುವ ನೀರಿನ ಯೋಜನೆ ಶಾಸಕರ ಅನುದಾನದಲ್ಲಿ ಕೈಗೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಮಕ್ಕಳು, ಮಹಿಳೆಯರ ಅಭಿವೃದ್ಧಿ ಪೂರಕ ಕಾರ್ಯಗಳಿಗೆ ಪಂಚಾಯಿತಿ ಸದಾ ಸ್ಪಂದಿಸುವುದಾಗಿ ತಿಳಿಸಿದರು.
ಉಪಾಧ್ಯಕ್ಷ ದೇವು ಪೂಜಾರಿ, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಪಿಡಿಒ ಸುಮನಾ ಕೆ.ಪ್ರಾಸ್ತಾವಿಕ ಮಾತನಾಡಿದರು. ಕಾರ್ಯದರ್ಶಿ ಪಾಪಣ್ಣ ಸ್ವಾಗತಿಸಿದರು.