ಜಿಲ್ಲೆ

ಜವಾಬ್ದಾರಿ ಪ್ರಾಮಾಣಿಕವಾಗಿ ನಿಭಾಯಿಸುವೆ - ಡಿ.ಎಂ. ಐಹೊಳೆ

Belagavi

ರಾಯಬಾಗ: ಶ್ರಾವಣ ತಿಂಗಳ ಸೋಮವಾರದಂದೇ ಸಿಎಂ ಬಿ.ಎಸ್. ಯಡಿಯೂರಪ್ಪನವರು ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ನನಗೆ ಸಿಹಿ ಸುದ್ದಿ ನೀಡಿದ್ದಾರೆ. ಹಿರಿಯರು ನೀಡಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುವೆ ಎಂದು ಶಾಸಕ ಡಿ.ಎಂ. ಐಹೊಳೆ ಹೇಳಿದ್ದಾರೆ. ಮಂಗಳವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ವೇಳೆ ನಿಗಮ ಮಂಡಳಿಗಳಿಗೆ ನೇಮಕಗೊಳಿಸಿ ಶಾಸಕರಿಗೆ ಸಂತೋಷದ ಸುದ್ದಿ ನೀಡಲಾಗಿದೆ. ಬಿಎಸ್‌ವೈ ಒಂದು ವರ್ಷದಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಪ್ರವಾಹ ಮತ್ತು ಕೋವಿಡ್-19 ಪರಿಸ್ಥಿತಿಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿದ್ದಾರೆ. ಬಡವರಿಗೆ, ನೇಕಾರರಿಗೆ, ರೈತರಿಗೆ, ಮೀನುಗಾರರಿಗೆ ಪ್ಯಾಕೇಜ್ ಘೋಷಣೆ ಮಾಡಿ, ಆರ್ಥಿಕ ಚೈತನ್ಯ ನೀಡಿದ್ದಾರೆ ಎಂದು ತಿಳಿಸಿದರು.