ವಿಜಯವಾಣಿ ಸುದ್ದಿಜಾಲ ಧಾರವಾಡ
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಚುನಾವಣೆಯಲ್ಲಿ ಗೆದ್ದ ನೂತನ ಆಡಳಿತ ಮಂಡಳಿ ಆಡಳಿತಾತ್ಮಕ ಚಟುವಟಿಕೆ ನಡೆಸದಂತೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಇದು ಕಾನೂನು ಹೋರಾಟಕ್ಕೆ ಸಿಕ್ಕ ಜಯ ಎಂದು ಮಹಾಸಭಾ ಜಿಲ್ಲಾ ಘಟಕದ ಹಂಗಾಮಿ ಅಧ್ಯಕ್ಷ ಗುರುರಾಜ ಹುಣಸಿಮರದ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಸಭಾ ಜಿಲ್ಲಾ ಘಟಕಕ್ಕೆ ಜುಲೈನಲ್ಲಿ ಚುನಾವಣೆ ನಡೆದಿದೆ. ಸುಮಾರು 700ಕ್ಕೂ ಹೆಚ್ಚು ಸದಸ್ಯರನ್ನು ಅಕ್ರಮವಾಗಿ ನೋಂದಾಯಿಸಿಕೊಳ್ಳಲಾಗಿತ್ತು. ಇದರ ವಿರುದ್ಧ ಧ್ವನಿ ಎತ್ತಿದರೆ ಚುನಾವಣಾಽಕಾರಿಗಳಿಂದ ಸ್ಪಂದನೆ ಸಿಗಲಿಲ್ಲ. ಶಾಸಕರಾದ ವಿನಯ ಕುಲಕರ್ಣಿ ಮತ್ತು ಅರವಿಂದ ಬೆಲ್ಲದ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ತಮಗೆ ಬೇಕಾದವರನ್ನು ನಿಯಮಬಾಹಿರವಾಗಿ ಸದಸ್ಯರನ್ನಾಗಿ ಮಾಡಿಕೊಂಡಿದ್ದರು. ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದೆ, ಪ್ರಕರಣ ಇತ್ಯರ್ಥವಾಗುವವರೆಗೆ ನೂತನ ಆಡಳಿತ ಮಂಡಳಿಗೆ ಚಟುವಟಿಕೆ ನಡೆಸದಂತೆ ನ್ಯಾಯಾಲಯ ತಡೆ ನೀಡಿದೆ ಎಂದರು.
ಶಾಸಕರಾದ ವಿನಯ ಮತ್ತು ಬೆಲ್ಲದ ಅವರು ತಮ್ಮ ಸಂಬ0ಧಿಕರು ಮತ್ತು ಲಿಂಗಾಯತರಲ್ಲದವರಿಗೆ ಮಹಾಸಭೆಯ ಸದಸ್ಯತ್ವ ಕೊಡಿಸಿದ್ದಾರೆ. ಸಂಬAಽಸಿದ ದಾಖಲೆಗಳನ್ನು ನ್ಯಾಯಾಲಯಕ್ಕೆ ಕೊಟ್ಟಿದ್ದೇನೆ. ಮಹಸಾಭೆಯ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯಾಗುವರೆಗೆ ನಾನೇ ಅಧ್ಯಕ್ಷನಾಗಿರುತ್ತೇನೆ ಎಂದರು.