ಹೆಬ್ರಿ: ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಕ್ರೀಡಾ ಭಾರತಿ ಉಡುಪಿ ಜಿಲ್ಲೆ ವತಿಯಿಂದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಎಂ.ವಿ ಉಪಾಧ್ಯ, ಗೋವಿಂದ ಚಿಪ್ಲೂಣ್ಕರ್, ರಘುಪತಿ ರಾವ್, ಮುತ್ತಯ್ಯ ಶೆಟ್ಟಿ, ಶ್ರೀನಿವಾಸ ಹೆಗ್ಡೆ, ಮೋಹನ್ ದಾಸ ಶೆಟ್ಟಿ, ಗಣಪಯ್ಯ ಶೆಟ್ಟಿ, ಜಯರಾಮ ಶೆಟ್ಟಿ ಅವರನ್ನು ಗೌರವಿಸಲಾಯಿತು.
ಕ್ರೀಡಾ ಭಾರತಿ ಮಂಗಳೂರು ವಿಭಾಗ ಸಂಯೋಜಕ ಪ್ರಸನ್ನ ಶೆಣೈ, ಜಿಲ್ಲಾ ಗೌರವಾಧ್ಯಕ್ಷ ಕೋಟ ವಸಂತ ಶೆಟ್ಟಿ, ಜಿಲ್ಲಾ ಅಧ್ಯಕ್ಷ ಬೈಲೂರು ಮಂಜುನಾಥ ಶೆಟ್ಟಿ, ತಾಲೂಕು ಘಟಕದ ಅಧ್ಯಕ್ಷ ಸೀತಾನದಿ ವಿಠಲಶೆಟ್ಟಿ, ಕಾರ್ಯದರ್ಶಿ ವಿಜಯಕುಮಾರ್ ಶೆಟ್ಟಿ ಹೆಬ್ರಿ, ಕುಂದಾಪುರ ತಾಲೂಕು ಕಾರ್ಯದರ್ಶಿ ಸುಕೇಶ್ ಶೆಟ್ಟಿ ಕೊಲ್ಲೂರು, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಗಣಪಯ್ಯ ಕಾರ್ಕಳ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶ್ರೀಧರ ಶೆಟ್ಟಿ ಉಪಸ್ಥಿತರಿದ್ದರು.