ಜಿಲ್ಲೆ

3 ತಾಲೂಕುಗಳು ತೀವ್ರ ಬರಪೀಡಿತ ಪಟ್ಟಿಗೆ ಸೇರ್ಪಡೆ; ರಾಜ್ಯ ಸರ್ಕಾರದ ಪರಿಷ್ಕೃತ ಆದೇಶ

ಮಂಜುನಾಥ ಅಂಗಡಿ

ಧಾರವಾಡ: ಪ್ರಸಕ್ತ 2023- 24ರ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ಅಳ್ನಾವರ, ಅಣ್ಣಿಗೇರಿ, ಕಲಘಟಗಿ ತಾಲೂಕಗಳನ್ನು ತೀವ್ರ ಬರಪೀಡಿತ ತಾಲೂಕುಗಳ ಹೆಚ್ಚುವರಿ ಪಟ್ಟಿಗೆ ಸೇರ್ಪಡೆ ಮಾಡಿ ರಾಜ್ಯ ಸರ್ಕಾರ ಘೋಷಿಸಿದೆ.
ಜಿಲ್ಲೆಯ ಧಾರವಾಡ, ನವಲಗುಂದ, ಕುಂದಗೋಳ, ಹುಬ್ಬಳ್ಳಿ ನಗರ, ಹುಬ್ಬಳ್ಳಿ ತಾಲೂಕುಗಳನ್ನು ಮೊದಲ ಹಂತದಲ್ಲಿ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿತ್ತು. ತೀವ್ರ ಬರದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಕೈಪಿಡಿ- 2020ರ ನಿಯಮ ಮತ್ತು ಮಾನದಂಡಗಳ ಅನುಸಾರ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತವಾರಿ ಕೇಂದ್ರದ ನಿರ್ದೇಶಕರ ಪ್ರಸ್ತಾವನೆ ಪರಿಶೀಲಿಸಿ, ರಾಜ್ಯ ಸರ್ಕಾರವು ಪರಿಷ್ಕೃತ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದಿಂದ ಕಾಲಕಾಲಕ್ಕೆ ನೀಡಲಾಗುವ ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ನಿಯಮಗಳು ಮತ್ತು ಮಾರ್ಗಸೂಚಿಗಳ ಅನ್ವಯ ಬರ ನಿರ್ವಹಣೆ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಽಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.